ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಳಸಾ ಬಂಡೂರಿ ವಿಸ್ತೃತ ಯೋಜನೆಗೆ ಕೇಂದ್ರ ಜಲ ಆಯೋಗ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ. ಇದು ಸಮಸ್ತ ಕನ್ನಡಿಗರ ಹೋರಾಟಕ್ಕೆ ದೊರೆತ ಫಲ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ. ರಾಜಕೀಯಕ್ಕೆ ಅತೀತವಾಗಿ ರೈತರು, ಕನ್ನಡಪರ ಹೋರಾಟಗಾರರು, ಕಾರ್ಮಿಕರು ಸೇರಿ ಎಲ್ಲರೂ ನಡೆಸಿದ ಹೋರಾಟಕ್ಕೆ ಸಂದ ಜಯವಿದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ನಮ್ಮ ಜೆಡಿಎಸ್ ಪಕ್ಷ ಕನ್ನಡಿಗರ ಜತೆಗೂಡಿ ಹೋರಾಟ ನಡೆಸಿದೆ. ಮಾಜಿ ಪ್ರಧಾನಮಂತ್ರಿಗಳಾದ ದೇವೇಗೌಡರು ಅವರು ಸಂಸತ್ತಿನ ಒಳಗೆ, ಹೊರಗೆ ದೊಡ್ಡ ಸಂಘರ್ಷವನ್ನೇ ನಡೆಸಿದ್ದಾರೆ. ಕೆಲ ದಿನಗಳ ಹಿಂದೆ ಪ್ರದಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದರು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ನಮ್ಮ @JanataDal_S ಪಕ್ಷ ಕನ್ನಡಿಗರ ಜತೆಗೂಡಿ ಹೋರಾಟ ನಡೆಸಿದೆ. ಮಾಜಿ ಪ್ರಧಾನಮಂತ್ರಿಗಳಾದ ಶ್ರೀ @H_D_Devegowda ಅವರು ಸಂಸತ್ತಿನ ಒಳಗೆ, ಹೊರಗೆ ದೊಡ್ಡ ಸಂಘರ್ಷವನ್ನೇ ನಡೆಸಿದ್ದಾರೆ. ಕೆಲ ದಿನಗಳ ಹಿಂದೆ ಮಾನ್ಯ ಪ್ರದಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದರು.2/3#ಕಳಸ_ಬಂಡೂರಿ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 29, 2022