ಕಳಸಾ-ಬಂಡೂರಿ ಯೋಜನೆಗೆ ಕೇಂದ್ರದ ಹಸಿರು ನಿಶಾನೆ ಸ್ವಾಗತಾರ್ಹ: ಸಚಿವ ಸಿ. ಸಿ. ಪಾಟೀಲ ಸಂತಸ

ಹೊಸ ದಿಗಂತ ವರದಿ, ಗದಗ:

ಉತ್ತರ ಕರ್ನಾಟಕ ಭಾಗದ ಬಹು ದಿನಗಳ ಬೇಡಿಕೆಯಾಗಿದ್ದ ಕಳಸ ಬಂಡೂರಿ ಯೋಜನೆಯ ಡಿ.ಪಿ.ಆರ್. ಅನ್ನು ಕೇಂದ್ರ ಸರ್ಕಾರವು ಒಪ್ಪಿಕೊಂಡು ಅನುಮೋದಿಸಿರುವುದಕ್ಕೆ ವಿಶೇಷವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಈ ಯೋಜನೆ ಸಾಕಾರಗೊಳ್ಳುವಲ್ಲಿ ಶ್ರಮಿಸಿದ ಕೇಂದ್ರ ಸಚಿವ ಅಮಿತ್ ಶಾ, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಮತ್ತು ಪ್ರಹ್ಲಾದ ಜೋಶಿ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಲೋಕೋಯೋಗಿ ಇಲಾಖೆ ಸಚಿವ ಸಿ ಸಿ ಪಾಟೀಲ ಅವರು ಹೇಳಿದರು.

ಈ ಯೋಜನೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿಂದೆ ಸ್ವತಃ ಹೋರಾಟ ಮಾಡಿದ್ದಲ್ಲದೇ, ತಾವು ಮುಖ್ಯಮಂತ್ರಿಯಾದ ನಂತರ ಈ ಯೋಜನೆಯ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಂಡು ವಿಶೇಷ ಆಸಕ್ತಿ ವಹಿಸಿದ್ದಕ್ಕೆ ಕೃತಜ್ಞತಾಪೂರ್ವಕ ವಂದನೆಗಳು. ನಮ್ಮ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಮತ್ತಿತರ ಅಧಿಕಾರಿ ಮಿತ್ರರ ಪ್ರಯತ್ನವನ್ನೂ ಈ ಸಂದರ್ಭದಲ್ಲಿ ಕೃತಜ್ಞತೆಯಿಂದ ಸ್ಮರಿಸುತ್ತೇನೆ. ಈ ಮಹತ್ವಪೂರ್ಣ ಯೋಜನೆಗೆ ಶೀಘ್ರಗತಿಯಲ್ಲಿ ಹಸಿರು ನಿಶಾನೆ ದೊರೆತಿರುವುದರಿಂದ ನಮ್ಮ ಉತ್ತರ ಕರ್ನಾಟಕ ಭಾಗದ ರೈತರಿಗೆ ವರದಾನವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವರಾದ ಸಿ. ಸಿ. ಪಾಟೀಲ ಅಭಿಪ್ರಾಯ ಪಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!