ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಕಲಬುರಗಿ:
ಭಾರಿ ಮಳೆಯಿಂದ ಜಿಲ್ಲೆಯಲ್ಲಿರುವ ಜಲಾಶಯಗಳು ಭತಿ೯ಯಾಗಿದ್ದು, ನೀರು ಹೊರ ಬಿಟ್ಟ ಪರಿಣಾಮ ಬಹುತೇಕ ಸೇತುವೆಗಳು ಮುಳುಗಡೆಯಾಗಿವೆ.
ಈ ನಿಟ್ಟಿನಲ್ಲಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಾರಂಪಳ್ಳಿ ಹಾಗೂ ಕಾಳಗಿ ತಾಲೂಕಿನ ಕಾಂಚನಾಳ ಗ್ರಾಮಕ್ಕೆ ಕಲಬುರಗಿ ಜಿಲ್ಲಾಧಿಕಾರಿ ವಿ.ವಿ.ಜೋತ್ಸಾ ಭೇಟಿ ನೀಡಿ ಪ್ರವಾಹದಿಂದ ಗ್ರಾಮಕ್ಕೆ ನುಗ್ಗಿರುವ ಪ್ರದೇಶವನ್ನು ವೀಕ್ಷಣೆ ಮಾಡಿದರು.
ನಂತರ ಮಾತನಾಡಿದ ಅವರು, ಮಳೆಯಿಂದಾಗಿ ಅನೇಕ ಗ್ರಾಮಗಳಿಗೆ ನೀರು ಹೊಕ್ಕಿವೆ. ಅನೇಕ ಮನೆಗಳು ಜಲಾವೃತ ಆಗಿವೆ. ಇದರ ಜೊತೆಗೆ ರೈತರು ಬೆಳೆದ ಬೆಳೆಗಳು ಸಹ ನೀರಿನಿಂದ ಕೊಚ್ಚಿಕೊಂಡು ಹೋಗಿವೆ ಎಂದರು.
ಎಲ್ಲಾ ರೀತಿಯ ಹಾನಿಯ ಬಗ್ಗೆ ನಿಖರವಾದ ಮಾಹಿತಿ ಕಲೆ ಹಾಕೀ ವರದಿ ನೀಡುವಂತೆ ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ ಅವರಿಗೆ ಸೂಚನೆ ನೀಡಿದರು.