ಕಾಳಿ ಮಾತೆ ವಿವಾದ: ನಿರ್ದೇಶಕಿ ಲೀನಾ ಮಣಿಮೇಕಲೈಗೆ ಸಮನ್ಸ್​ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಾಳಿ ಮಾತೆಯ ವಿವಾದ ಸೃಷ್ಟಿಸಿದ್ದ ನಿರ್ದೇಶಕಿ ಲೀನಾ ಮಣಿಮೇಕಲೈಗೆ ದೆಹಲಿ ನ್ಯಾಯಾಲಯ ಸಮನ್ಸ್​ ಜಾರಿ ಮಾಡಿದೆ.
ಸಾಕ್ಷ್ಯಾಚಿತ್ರವೊಂದು ನಿರ್ದೇಶಿಸುತ್ತಿರುವ ಲೀನಾ ಕಾಳಿ ಮಾತೆ ಕೈಯಲ್ಲಿ ಸಿಗರೇಟು ನೀಡಿದ ಪೋಸ್ಟರ್​ ಬಿಡುಗಡೆ ಮಾಡಿದ್ದು, ಭಾರೀ ವಿವಾದಕ್ಕೆ ಕಾರಣವಾಗಿತ್ತು.
ದೇಶದವಿವಿಧ ಲೀನಾ ವಿರುದ್ಧ ದೂರುಗಳು ದಾಖಲಾಗಿದ್ದು, ಸದ್ಯ ದೆಹಲಿ ಕೋರ್ಟ್​ ಸಮನ್ಸ್ ಕೂಡ ಜಾರಿ ಮಾಡಿದ್ದು, ಆಗಸ್ಟ್​ 6 ರಂದು ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿದೆ.
ಚಿತ್ರದ ಪೋಸ್ಟರ್​ನಲ್ಲಿ ಹಿಂದೂ ದೇವತೆ ಕಾಳಿ ಮಾತೆಗೆ ಸಿಗರೇಟ್ ನೀಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಲ್ಲದೇ, ಸಭ್ಯತೆಯ ಮೂಲಭೂತ ಅಂಶಗಳಿಗೆ ವಿರುದ್ಧವಾಗಿದೆ ಎಂದು ಕೋರ್ಟ್​ನಲ್ಲಿ ಈ ಪೋಸ್ಟರ್​ ವಿರುದ್ಧ ವಾದ ಮಂಡಿಸಲಾಗಿದೆ.
ಯಾವಾಗ ಈ ಟ್ವೀಟ್ ಸಾಕಷ್ಟು ವಿವಾದಕ್ಕೆ ಕಾರಣವಾಯಿತೋ, ಎಚ್ಚೆತ್ತುಕೊಂಡ ಟ್ವಿಟರ್ ಸಂಸ್ಥೆಯು ಈ ಟ್ವೀಟ್ ಅನ್ನು ಡಿಲೀಟ್ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲೂ ಕೂಡ ಲೀನಾ ಮಣಿಮೇಕಲೈ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!