spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡಿ: ಕಲ್ಲಿನಾಥ ಸಾಮೀಜಿ ಒತ್ತಾಯ

- Advertisement -Nitte

ಹೊಸದಿಗಂತ ವರದಿ, ಹುಬ್ಬಳ್ಳಿ:

ಸಿಎಂ ಬಸವರಾಜ ಬೊಮ್ಮಾಯಿಯವರು ಕೂಡಲೆ ಸಚಿವ ಸಂಪುಟದಲ್ಲಿ ಗಾಣಿಗ ಸಮಾಜದವರಿಗೆ ಸ್ಥಾನ ನೀಡಬೇಕು. ಹಿರಿಯರಾದ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವಿಜಯಪುರದ ದಿಗಂಬರೇಶ್ವರ ಸಂಸ್ಥಾನಮಠದ ಕಲ್ಲಿನಾಥ ಸಾಮೀಜಿ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗಾಣಿಗ ಸಮಾಜದವರಿಗೆ ಸಚಿವ ಸ್ಥಾನ ನೀಡಬೇಕು. ಆದರೆ ಗಾಣಿಗ ಸಮಾಜದ ಯಾರೊಬ್ಬರು ಶಾಸಕರಾಗಿ ಆಯ್ಕೆಯಾಗಿಲ್ಲ. ಲಕ್ಷ್ಮಣ ಸವದಿ ಅವರು ಮಾತ್ರ ವಿಧಾನ ಪರಿಷತ್‌ಗೆ ಆಯ್ಕೆ ಯಾಗಿದ್ದರಿಂದ ಮರಳಿ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಬೊಮ್ಮಾಯಿ ಅವರಲ್ಲಿ ವಿನಂತಿಸಿದರು. ಮುಂಬರುವ ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಮತ್ತು ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಉತ್ತರಿಸಬೇಕಾಗುತ್ತೆ ಎಂದು ತಿಳಿಸಿದರು.
ಗಾಣಿಗ ಸಮುದಾಯ ರಾಜ್ಯದಲ್ಲಿ 85 ಲಕ್ಷ ಕ್ಕೂ ಅಧಿಕ ಮತದಾರರಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ 25 ಸಾವಿರಕ್ಕೂ ಹೆಚ್ಚು ಮತದಾರರು ಗಾಣಿಗ ಸಮಾಜದವರು ಇದ್ದಾರೆ. ಜೊತೆಗೆ ಮುಂದಿನ ಚುಣಾವಣೆಯಲ್ಲಿ ಬೊಮ್ಮಾಯಿ ಅವರು ಚುಣಾವಣೆಯಲ್ಲಿ ಗೆಲುವು ಸಾಧಿಸಬೇಕಾದರೆ ಕೂಡಲೆ ಸಚಿವ ಸಂಪುಟದಲ್ಲಿ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಬೆಕು ಎಂದು ಸ್ವಾಮೀಜಿ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ವತಿಯಿಂದ ಕಲಘಟಗಿ ಕ್ಷೇತ್ರಕ್ಕೆ ನಾಗರಾಜ ಛಬ್ಬಿಗೆ ಟಿಕೆಟ್ ನೀಡಬೇಕು. ಆದರೆ ಕಾಂಗ್ರೆಸ್ ನಮ್ಮ ಸಮುದಾಯದವನ್ನು ಕಡೆಗಣಿಸುತ್ತಿದೆ. ಮುಂದಿನ ದಿನದಲ್ಲಿ ಬಿ ಫಾಮ್೯ ನೀಡದಿದ್ದರೆ ಹೋರಾಟ ಮಾಡಲಾಗುತ್ತದೆ ಎಂದರು.
ಗೋಷ್ಠಿಯಲ್ಲಿ ಸಮುದಾಯದ ಮುಖಂಡರಾದ ಚಂದ್ರಶೇಖರ ಕಾಕಂಡಕಿ, ಬಸವರಾಜ ಇದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss