Thursday, August 18, 2022

Latest Posts

ಕಲ್ಯಾಣ ಕರ್ನಾಟಕ ಉತ್ಸವ 2021: ಸರ್ದಾರ್ ಪಟೇಲ್’ರ ಪ್ರತಿಮೆಗೆ ಸಿಎಂ ಬೊಮ್ಮಾಯಿ ಮಾಲಾರ್ಪಣೆ

ಹೊಸದಿಗಂತ ವರದಿ, ಕಲಬುರಗಿ:

ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ನಗರದ ಸರ್ದಾರ ವಲ್ಲಭ ಭಾಯಿ ವೃತ್ತದಲ್ಲಿರುವ ಸರ್ದಾರ ವಲ್ಲಭ ಭಾಯಿ ಪಟೇಲರ ಪ್ರತಿಮೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ವೇದಿಕೆ ಕಾಯ೯ಕ್ರಮದಲ್ಲಿ ಮಾತನಾಡಿದ ಅವರು, ನವ ಕಲ್ಯಾಣ ಕರ್ನಾಟಕ, ನವ ಕರ್ನಾಟಕ ಹಾಗೂ ನವ ಭಾರತದ ನಿರ್ಮಾಣಕ್ಕೆ ಪಣ ತೊಟ್ಟರು. ಪಟೇಲರ ಕೊಡುಗೆ ದೇಶಕ್ಕೆ ಅಪಾರವಾದದ್ದು, ಅವರ ಮಾರ್ಗದಲ್ಲಿ ನಾವೆಲ್ಲರೂ ಸಾಗಬೇಕು ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ 71ನೇ ವಷ೯ದ ಹುಟ್ಟು ಹಬ್ಬದ ಅಂಗವಾಗಿ ಶುಭಾಶಯ ತಿಳಿಸಿದರು.
ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಕಲಬುರಗಿಗೆ ಆಗಮಿಸಿ, ರಸ್ತೆಯ ಮೂಲಕ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪ್ರದೇಶ ಮಂಡಳಿಯ ಅಧ್ಯಕ್ಷ ಹಾಗೂ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ರಾಜಕುಮಾರ ಪಾಟೀಲ್ ತೆಲ್ಕೂರ್, ಅಫಜಲಪೂರ ಶಾಸಕ ಎಂ.ವೈ ಪಾಟೀಲ್, ಕಲ್ಯಾಣ ಕರ್ನಾಟಕ ಉತ್ಸವ ಸಮಿತಿ ಅಧ್ಯಕ್ಷ ಹಾಗೂ ಎಂ.ಎಲ್.ಸಿ ಶಶೀಲ್ ಜಿ. ನಮೋಶಿ, ನವೀಕರಿಸಬಹುದಾದ ಇಂಧನ aಅಭಿವೃದ್ಧಿ ನಿಯಮಿತದ ಅಧ್ಯಕ್ಷ ಚಂದು ಪಾಟೀಲ್ ಸೇರಿದಂತೆ ಶಾಸಕರಾದ ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ ಸದಸ್ಯರು ಹಾಗೂ ಜಿಲ್ಲಾಧಿಕಾರಿ ವಿ.ವಿ ಜ್ಯೋತ್ಸ್ನಾ  ಅವರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!