ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಉತ್ತರಪ್ರದೇಶದ ಮಾಜಿ ಸಿಎಂ, ಬಿಜೆಪಿ ಹಿರಿಯ ಮುಖಂಡ ಕಲ್ಯಾಣ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.
ಈ ಬಗ್ಗೆ ಕಲ್ಯಾಣ್ ಸಿಂಗ್ ಅವರ ಮೊಮ್ಮಗ ಸಂದೀಪ್ ಸಿಂಗ್ ಮಾಹಿತಿ ನೀಡಿದ್ದು, ‘ಕಲ್ಯಾಣ್ ಸಿಂಗ್ ಅವರ ಆರೋಗ್ಯ ಸುಧಾರಿಸುತ್ತಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನುವ ಸುಳ್ಳು ಸುದ್ದಿ ಹರಡುತ್ತಿದೆ.
ಈ ರೀತಿ ಸುದ್ದಿಯಿಂದ ಪ್ರಧಾನಿ ಮೋದಿಯವರು ನಮಗೆ ಕರೆ ಮಾಡಿ ಕಲ್ಯಾಣ್ ಸಿಂಗ್ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಈ ರೀತಿ ಸುಳ್ಳು ಸುದ್ದಿ ಹರಡಿಸುವುದು ತಪ್ಪು. ರೂಮರ್ಗಳಿಗೆ ಯಾರೂ ಕಿವಿಕೊಡಬೇಡಿ’ ಎಂದು ಮನವಿ ಮಾಡಿದ್ದಾರೆ.
He (Former CM Kalyan Singh) is better, recovering well. Rumours are rife (that he is not keeping well). PM Modi also called up to enquire about his health, I request people not to fall for rumours: Sandeep Singh, Kalyan Singh's grandson clarifies on his health. pic.twitter.com/jFhLvHRBuN
— ANI UP (@ANINewsUP) July 9, 2021