ಕಲ್ಯಾಣ ಕನಾ೯ಟಕ ಉತ್ಸವ: ಸಿಎಂ ಸಿದ್ದರಾಮಯ್ಯರಿಂದ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ

ಹೊಸದಿಗಂತ ವರದಿ ಕಲಬುರಗಿ:

ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ನಗರದ ಸದಾ೯ರ್ ವಲ್ಲಭಭಾಯಿ ಪಟೇಲ್ ಅವರ ಮೂತಿ೯ಗೆ ಮಾಲಾಪ೯ಣೆ ಮಾಡಿ ಗೌರವ ಸಲ್ಲಿಸಿದರು. ಸ್ವಾತಂತ್ರ್ಯ ದೊರೆತು 75ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತಿದೆ.

ಹೈದರಾಬಾದ್‌ನಿಂದ ವಿಶೇಷ ವಿಮಾನದ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖಗೆ೯,ಶಾಸಕ ಅಲ್ಲಂಪ್ರಭು ಪಾಟೀಲ್, ಖನೀಜ್ ಫಾತೀಮಾ, ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪಾ ಕಮಕನೂರ್, ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು.

ದೇಶಾದ್ಯಂತ ಸ್ವಾತಂತ್ರ್ಯ ಸಂಭ್ರಮದಲ್ಲಿದ್ದರೂ ಕಲ್ಯಾಣ ಕರ್ನಾಟಕ ಮಾತ್ರ ಹೈದರಾಬಾದ್‌ ನಿಜಾಮನ ಆಳ್ವಿಕೆಯಲ್ಲಿತ್ತು. ಸುಮಾರು ಹದಿಮೂರು ತಿಂಗಳುಗಳ ಬಳಿಕ ಅಂದರೆ, 1948 ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಭಾರತದ ಭಾಗವಾಯಿತು. ಏಳು ಜಿಲ್ಲೆಗಳಿಗೆ ಸಿಕ್ಕ ಸ್ವಾತಂತ್ರ್ಯದ ಸ್ಮರಣಾರ್ಥ ಇಂದು ಕಲ್ಯಾಣ ಕರ್ನಾಟಕ ಉತ್ಸವವನ್ನು ಆಚರಿಸಲಾಗುತ್ತದೆ. ಇಂದು ಏಳು ಜಿಲ್ಲೆಗಳಲ್ಲಿ ಸಂಭ್ರಮ ಕಳೆಕಟ್ಟಿದ್ದು, ಧ್ವಜಾರೋಹಣ ನೆರವೇರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!