ಹೊಸದಿಗಂತ ವರದಿ ಕಲಬುರಗಿ:
79ನೇ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಕಲ್ಯಾಣ ಕರ್ನಾಟಕ ಉತ್ಸವದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿರುವ ಸರ್ದಾರ್ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಕಲ್ಯಾಣ ಕರ್ನಾಟಕ ಭಾಗದ ವಿಮೋಚನಾ ಹೋರಾಟದ ಇತಿಹಾಸವನ್ನು ಸ್ಮರಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಉತ್ಸವದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಮುಖ್ಯಮಂತ್ರಿ, ದೇಶದ ಏಕೀಕರಣದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಕೊಡುಗೆಯನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಸಚಿವ ಪ್ರಿಯಾಂಕ ಖರ್ಗೆ,ಶಾಸಕರಾದ ಅಲ್ಲಮಪ್ರಭು ಪಾಟೀಲ್, ಎಂವೈ ಪಾಟೀಲ್, ಜಗದೇವ ಗುತ್ತೇದಾರ್, ಶಶೀಲ್ ನಮೋಶಿ, ಸೇರಿದಂತೆ ಜನಪ್ರತಿನಿಧಿಗಳು, ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ನಗರದಲ್ಲಿ ವಿವಿಧ ಸಾಂಸ್ಕೃತಿಕ, ಅಭಿವೃದ್ಧಿ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮುಖ್ಯಮಂತ್ರಿ ಅವರು ಬಳಿಕ ಉತ್ಸವದ ಇತರೆ ಕಾರ್ಯಕ್ರಮಗಳಲ್ಲೂ ಭಾಗವಹಿಸಲಿದ್ದಾರೆ



