ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಚಿಹ್ನೆ, ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿದ ಜನಾರ್ಧನ ರೆಡ್ಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮಾಜಿ ಸಚಿವ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ಧನ ರೆಡ್ಡಿ ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಚಿಹ್ನೆ ಮತ್ತು ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಚುನಾವಣಾ ಚಿಹ್ನೆ ಫುಟ್ ಬಾಲ್ ಅನ್ನು ಬಿಡುಗಡೆಗೊಳಿಸಿದರು. ಇದೇ ವೇಳೆ ಜನಾರ್ಧನ ರೆಡ್ಡಿ ತಮ್ಮ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ, ಹಲವು ಹೊಸ ಘೋಷಣೆಗಳನ್ನು ಮಾಡಿದ್ದಾರೆ.

ಡಿಸೆಂಬರ್‌ 25, 2022ರಲ್ಲಿ ಹೊಸ ಪಕ್ಷ ಘೋಷಣೆ ಮಾಡಿರುವ ಅವರು, ಕೊಪ್ಪಳ ಜಿಲ್ಲೆಯ ಗಂಗಾವತಿಯಿಂದ ಕಣಕ್ಕಿಳಿಯಲಿದ್ದಾರೆ. ಹಲವು ಕ್ಷೇತ್ರಗಳಿಗೆ ಸಹ ಅವರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಜನಾರ್ದನ ರೆಡ್ಡಿ ಸ್ಥಾಪಿಸಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಗಳು ಫುಟ್‌ಬಾಲ್ ಚಿಹ್ನೆಯಡಿ ಈ ಬಾರಿಯ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಚುನಾವಣಾ ಆಯೋಗವು ಪಕ್ಷಕ್ಕೆ ಚಿಹ್ನೆಯನ್ನು ಸೋಮವಾರ ಹಂಚಿಕೆ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!