ನಟ ಕಮಲ್ ಹಾಸನ್‌ಗೆ ಅನಾರೋಗ್ಯ: ಚನ್ನೈ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಲವು ವರ್ಷಗಳ ನಂತರ ಕಮಲ್ ವಿಕ್ರಮ್ ಚಿತ್ರದ ಮೂಲಕ ದೊಡ್ಡ ಯಶಸ್ಸನ್ನು ಪಡೆದ ತಮಿಳು ನಟ ಕಮಲ್ ಹಾಸನ್ ಅನಾರೋಗ್ಯಕ್ಕೀಡಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ನವೆಂಬರ್ 23 ರಂದು ಬೆಳಗ್ಗೆ ಕಮಲ್ ಹಾಸನ್ ಹೈದರಾಬಾದ್‌ಗೆ ಆಗಮಿಸಿದ್ದ ಅವರು, ಕಲಾತಪಸ್ವಿ ವಿಶ್ವನಾಥ್ ಅವರ  ಆಶೀರ್ವಾದ ಪಡೆದರು. ಆ ನಂತರ ಚೆನ್ನೈಗೆ ಹೋದ ಕಮಲ್‌ ಆರೋಗ್ಯದಲ್ಲಿ ಏರುಪೇರಾಗಿದೆ. ಸ್ವಲ್ಪ ನೀರಸ ಮತ್ತು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಮಲ್ ಹಾಸನ್ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಕಮಲ್ ಹಾಸನ್ ಆಸ್ಪತ್ರೆಯಲ್ಲಿದ್ದಾರೆ. ಎಲ್ಲಾ ವೈದ್ಯಕೀಯ ಚಿಕಿತ್ಸೆ ನೀಡಿದ್ದು, ಇಂದು ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಇನ್ನೆರಡು ದಿನ ಸಂಪೂರ್ಣ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಆಸ್ಪತ್ರೆಗೆ ದಾಖಲಾದ ವಿಚಾರ ತಿಳಿದು ಕಮಲ್ ಅಭಿಮಾನಿಗಳು ಆತಂಕಗೊಂಡಿದ್ದರು. ಜ್ವರದಿಂದ ಆಸ್ಪತ್ರೆಗೆ ತೆರಳಿದ್ದ ಅವರು ಇಂದು ಡಿಸ್ಚಾರ್ಜ್ ಆಗಲಿದ್ದಾರೆ ಎಂಬ ಸುದ್ದಿ ಕೇಳಿ ಅಭಿಮಾನಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸುರಕ್ಷಿತವಾಗಿ ಮನೆಗೆ ಬರುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!