ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಕುರಿತು ನಟ ಕಮಲ್ ಹಾಸನ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದು, ಅಲ್ಲದೆ ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದು ಮೊಂಡುತನ ತೋರಿದ್ದಾರೆ.
ಈ ವಿಚಾರವಾಗಿ ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆಯಾಗದಂತೆ ಬ್ಯಾನ್ ಮಾಡಬೇಕು ಎಂದು ಕನ್ನಡ ಚಲನಚಿತ್ರ ಮಂಡಳಿಯ ಪದಾಧಿಕಾರಿಗಳು ಸಿಎಂ ಜೊತೆಗೆ ಸಭೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಸಹಕಾರ ನೀಡುವ ಭರವಸೆ ನೀಡಿದ್ದಾರೆ.
ಸಿನಿಮಾ ಬ್ಯಾನ್ ಗೆ ರಾಜ್ಯ ಸರ್ಕಾರದಿಂದ ಸಂಪೂರ್ಣ ಬೆಂಬಲ ವ್ಯಕ್ತವಾಗಿದ್ದು, ಕನ್ನಡದ ವಿಚಾರವಾಗಿ ಎಲ್ಲಾ ಗಟ್ಟಿಯಾಗಿ ನಿಲ್ಲಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸರ್ಕಾರ ಕಾನೂನಾತ್ಮಕವಾಗಿ ಸಹಕಾರ ನೀಡುತ್ತದೆ ಎಂದು ತಿಳಿಸಿದ್ದಾರೆ.
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಸಿನಿಮಾ ಜೂನ್ 5ಕ್ಕೆ ಎಲ್ಲೆಡೆ ರಿಲೀಸ್ ಆಗುತ್ತಿದೆ. ಆದರೆ ಕರ್ನಾಟಕದಲ್ಲಿ ಸಿನಿಮಾ ರಿಲೀಸ್ಗೆ ಭಾರೀ ವಿರೋಧ ವ್ಯಕ್ತವಾಗಿದೆ.