ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಭಾಷೆ ಹುಟ್ಟಿದ್ದು ತಮಿಳಿನಿಂದ ಎಂಬ ನಟ ಕಮಲ್ ಹಾಸನ್ ಹೇಳಿಕೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಕೂಡಲೇ ಕಮಲ್ ಹಾಸನ್ ರಾಜ್ಯದ ಜನತೆ ಬಳಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ಕಮಲ್ ಹಾಸನ್ ಮಾತಾಡಿದ್ದು ತಪ್ಪು. ಕನ್ನಡ ನೆಲ, ಜಲದ ವಿಷಯ ಯಾರೇ ಮಾತನಾಡಿದರೂ ಅದನ್ನು ಸಹಿಸೋಕೆ ಆಗಲ್ಲ. ಕಮಲ್ ಹಾಸನ್ ತಕ್ಷಣ ರಾಜ್ಯದ ಜನರ ಬಳಿ ಕ್ಷಮೆ ಕೇಳಬೇಕು. ಕ್ಷಮೆ ಕೇಳದೇ ಹೋದರೆ ನಾನೇ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದು ಅವರಿಗೆ ಮತ್ತು ಅವರ ಚಿತ್ರಕ್ಕೆ ನಿಷೇಧ ಹಾಕಬೇಕು ಎಂದು ಆದೇಶಿಸುತ್ತೇನೆ ಎಂದು ವಾರ್ನಿಂಗ್ ಕೊಟ್ಟಿದ್ದಾರೆ.