ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಮೋದಿ ಸರಕಾರವನ್ನು ಕೆಳಗಿಸಿ ಅಧಿಕಾರಕ್ಕೇರಲು ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ. ಇದರ ನಡುವೆ ಮಧ್ಯಪ್ರದೇಶ ಮಾಜಿ ಸಿಎಂ, ಕಾಂಗ್ರೆಸ್ ಆಪ್ತ ಕಮಲ್ ನಾಥ್ ನಡೆ ಕಾಂಗ್ರೆಸ್‌ಗೆ ಆತಂಕ ತರುತ್ತಿದೆ.
ಕಳೆದ ಫೆಬ್ರವರಿಯಲ್ಲಿ ಕಮಲ್ ನಾಥ್ ಬಿಜೆಪಿ ಸೇರಿಕೊಳ್ಳಲಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿತ್ತು. ಬಳಿಕ ತಮ್ಮ ಮನೆಯ ಮೇಲ್ಬಾಗದಲ್ಲಿ ಜೈ ಶ್ರೀರಾಮ್ ಧ್ವಜ ಹಾರಿಸಿದ್ದರು. ಇದೀಗ ಕಾಂಗ್ರೆಸ್ ರ್‍ಯಾಲಿಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ.
ಬೀತುಲ್‌ನಲ್ಲಿ ಆಯೋಜಿಸಿದ ರ್‍ಯಾಲಿಯಲ್ಲಿ ಮಾತನಾಡಿದ ಕಮಲ್ ನಾಥ್ ಜೈ ಶ್ರೀರಾಮ್ ಘೋಷಣೆ ಮೊಳಗಿಸಿದ್ದಾರೆ. ಇಷ್ಟೇ ಅಲ್ಲ ನೆರೆದಿದ್ದ ಜನರು ಕೂಡ ಒಕ್ಕೊರಲಿನಿಂದ ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಸಮಾವೇಶದಲ್ಲಿ ಜೈ ಶ್ರೀರಾಮ್ ಘೋಷಣೆಗಳು ಮೊಳಗುವುದು ವಿರಳ. ಆದರೆ ಕೆಲ ನಾಯಕರು ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಆದರೆ ಕಮಲ್ ನಾಥ್ ಈ ಬಾರಿ ಜೈಶ್ರೀರಾಮ್ ಘೋಷಣೆ ಕೂಗಿ, ಜನರನ್ನು ಘೋಷಣೆ ಕೂಗುವಂತೆ ಪ್ರೇರೆಪಿಸಿರುವುದು ಇದೀಗ ಗೊಂದಲಕ್ಕೆ ಕಾರಣಾಗಿದೆ.
ಕಳೆದ ಫೆಬ್ರವರಿಯಲ್ಲಿ ಕಮಲ್ ನಾಥ್ ಬಿಜೆಪಿ ಸೇರಲಿದ್ದಾರೆ ಅನ್ನೋ ಮಾತುಗಳು ದಟ್ಟವಾಗಿ ಕೇಳಿಬಂದಿತ್ತು. ಇಷ್ಟೇ ಅಲ್ಲ ಕಾಂಗ್ರೆಸ್ ನಾಯಕರಿಂದ ಅಂತರ ಕಾಯ್ದುಕೊಂಡಿದ್ದರು. ಇದೇ ವೇಳೆ ಕಮಲ್ ನಾಥ್ ತಮ್ಮ ಮನೆ ಮೇಲೆ ಶ್ರೀರಾಮನ ಬಾವುಟ ಹಾರಿಸಿದ್ದರು. ಇದು ಮತ್ತಷ್ಟು ಅನುಮಾನಕ್ಕೆ ಎಡೆ ಮಾಡಿಕೊಟ್ಟಿತು. ಪರಿಸ್ಥಿತಿ ತಿಳಿಗೊಳ್ಳುತ್ತಿದ್ದಂತೆ ಕಮಲ್ ನಾಥ್ ಮನೆ ಮೇಲೆ ಹಾಕಿದ್ದ ಶ್ರೀರಾಮ ಬಾವುಟ ತೆಗೆದಿದ್ದರು. ಇದೀಗ ಜೈ ಶ್ರೀರಾಮ್ ಘೋಷಣೆ ಮೊಳಗಿಸುವ ಮೂಲಕ ಮತ್ತೆ ಕಮಲ್ ನಾಥ್ ಬಿಜೆಪಿ ಸೇರುವ ಸೂಚನೆ ನೀಡಿದ್ದಾರಾ ಅನ್ನೋ ಚರ್ಚೆಗಳು ಶುರುವಾಗಿದೆ.