Saturday, August 13, 2022

Latest Posts

ರಾಜ್ಯದಲ್ಲಿ ಲಾಕ್ ಡೌನ್: ಮೇ.10ರಿಂದ 24ರವರೆಗೆ ಬೆಂಗಳೂರಿನಲ್ಲಿ ‘ನಿಷೇಧಾಜ್ಞೆ’ ಜಾರಿಗೊಳಿಸಿ ಕಮಲ್ ಪಂತ್ ಆದೇಶ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಮೇ.10ರಿಂದ ಮೇ.24ರ ಬೆಳಿಗ್ಗೆಯವರೆಗೆ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಬೆಂಗಳೂರು ನಗರದಲ್ಲೂ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಕೊರೋನಾ ನಿಯಂತ್ರಣಕ್ಕಾಗಿ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಿರುತ್ತಾರೆ.ಬೆಂಗಳೂರು ನಗರದಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ 1973ರ ಸಿಆರ್ ಪಿಸಿ ಅಡಿಯ 144(1) ಅಡಿಯಲ್ಲಿ ಕರ್ಪ್ಯೂ ಜಾರಿಗೊಳಿಸಲಾಗಿದೆ.
ಈ ಆದೇಶ ಮೇ.10ರ ಬೆಳಿಗ್ಗೆ 6ರಿಂದ ಮೇ.24ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ನಿಯಮವನ್ನು ಮೀರುವವರ ವಿರುದ್ಧ ಡಿಎಂಎ 2005ರ ಕಾಯ್ದೆಯ 51 ರಿಂದ 60ರ ಅಡಿಯಲ್ಲಿ ಹಾಗೂ ಐಪಿಸಿ 188 ಸೆಕ್ಷನ್, ಕೆಇಡಿಎ ಕಾಯ್ದೆ 2020ರ ಸೆಕ್ಷನ್ 4, 5 ಮತ್ತು 10ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss