ಮತ್ತೊಂದು ಪಾದಯಾತ್ರೆಗೆ ಸಜ್ಜಾದ ‘ಕಮಲ’ ಪಡೆ! ಈ ಪಾದಯಾತ್ರೆಯ ಸಾರಥಿಗಳು ಯಾರು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಡಾ ಹಗರಣದ ವಿರುದ್ಧ ಬಿಜೆಪಿ-ಜೆಡಿಎಸ್ ‘ಮೈಸೂರು ಚಲೋ’ ಪಾದಯಾತ್ರೆ ಮುಗಿದ ನಂತರವೂ ಅತೃಪ್ತ ಬಿಜೆಪಿ ನಾಯಕರು ಬಳ್ಳಾರಿಯತ್ತ ಪಾದಯಾತ್ರೆ ನಡೆಸಲು ತಯಾರಿ ನಡೆಸಿದ್ದಾರೆ. ಸೆ.17ರಿಂದ ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಯಲಿದೆ ಎಂದು ತಿಳಿದು ಬಂದಿದೆ.

ನಗರದ ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ಭಾನುವಾರ ಬಸನಗೌಡ ಪಾಟೀಲ್ ಯತ್ನಾಳ, ರಮೇಶ ಜಾರಕಿಹೊಳಿ, ಜಿ.ಎಂ.ಸಿದ್ದೇಶ್ವರ, ಅಣ್ಣಾಸಾಹೇಬ ಜೊಲ್ಲೆ, ಅರವಿಂದ ಲಿಂಬಾವಳಿ, ಪ್ರತಾಪ ಸಿಂಹ, ಕುಮಾರ ಬಂಗಾರಪ್ಪ ಸೇರಿದಂತೆ 12 ಬಿಜೆಪಿ ನಾಯಕರು ಗೌಪ್ಯ ಸಭೆ ನಡೆಸಿದರು.

ಪಾದಯಾತ್ರೆಯಲ್ಲಿ ವಾಲ್ಮೀಕಿ ಕಾಂಗ್ರೆಸ್ ಅಭಿವೃದ್ಧಿ ನಿಗಮದ ಹಗರಣಗಳು ಹಾಗೂ ಎಸ್ ಸಿ, ಎಸ್ ಟಿ ಅನುದಾನ ದುರ್ಬಳಕೆ ವಿರುದ್ಧ ಹೋರಾಟದ ಕುರಿತು ಚರ್ಚಿಸಲಾಯಿತು. ಮುಡಾ ಹಗರಣದಲ್ಲಿ ಬಿಜೆಪಿ ನಾಯಕರು ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ. ಇವರೆಲ್ಲರೂ ಸೇರಿಕೊಂಡು ಡಿ.ಕೆ.ಶಿವಕುಮಾರ ಅವರನ್ನು ಸಿಎಂ ಮಾಡಲು ಹೊರಟಿದ್ದಾರೆ ಎಂಬ ಸಂದೇಶವನ್ನು ಪಕ್ಷದ ಹೈಕಮಾಂಡ್‌ಗೆ ರವಾನಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಪ್ರತ್ಯೇಕ ಪಾದಯಾತ್ರೆ ಕುರಿತು ಕೇಂದ್ರ ನಾಯಕರ ಜತೆ ಚರ್ಚಿಸಲು ಸಭೆ ನಿರ್ಧರಿಸಿದೆ ಎನ್ನಲಾಗಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!