ಕಮಲಾ ಹ್ಯಾರೀಸ್‌ಗೆ ಕೊರೊನಾ ಸೋಂಕು ದೃಢ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಮೇರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಗೆ ಕೊರೋನಾ ಸೋಂಕು ದೃಢಪಟ್ಟಿದೆ. ವೆಸ್ಟ್‌ ಕೋಸ್ಟ್‌ಗೆ ಪ್ರವಾಸಕ್ಕೆ ತೆರಳಿದ್ದ ಅವರು ವಾಪಸ್ಸಾದ ನಂತರ ಕೋವಿಡ್‌ ಪರೀಕ್ಷೆಗೆ ಒಳಪಟ್ಟಿದ್ದರು. ಈ ಸಂದರ್ಭದಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಶ್ವೇತ ಭವನವು ಹೇಳಿದೆ.

ಅಧ್ಯಕ್ಷ ಜಿಯೋ ಬೈಡೆನ್‌ ಅವರ ಸಂಪರ್ಕದಲ್ಲಿ ಇರಲಿಲ್ಲ ಎನ್ನಲಾಗಿದ್ದು ಕಮಲಾ ಹ್ಯಾರೀಸ್‌ ಪ್ರಸ್ತುತ ತಮ್ಮ ಮನೆಯಲ್ಲಿ ಕ್ವಾರಂಟೈನ್‌ ಆಗಿದ್ದು ಚಿಕಿತ್ಸೆ ಪಡೆಯುವದರೊಂದಿಗೆ ಮನೆಯಿಂದಲೇ ಕಛೇರಿಯ ಕೆಲಸಗಳನ್ನು ನಿರ್ವಹಿಸಲಿದ್ದಾರೆ ಎಂದು ಶ್ವೇತ ಭವನದ ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!