ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುವಾಹಟಿ-ದೆಹಲಿ ರೈಲು ಮಾರ್ಗದಲ್ಲಿ ‘ಕವಚ್’ ವ್ಯವಸ್ಥೆಯನ್ನು ಅಳವಡಿಸಿಲ್ಲ ಎಂದು ರೈಲ್ವೆ ಮಂಡಳಿಯ ಅಧ್ಯಕ್ಷೆ ಜಯಾ ವರ್ಮಾ ಸಿನ್ಹಾ ಹೇಳಿದ್ದಾರೆ.
ಇದೇ ಮಾರ್ಗದಲ್ಲಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಸರಕು ಸಾಗಣೆ ರೈಲೊಂದು ಡಿಕ್ಕಿ ಹೊಡೆದಿದ್ದು, ಅನೇಕ ಸಾವು ನೋವುಗಳು ಸಂಭವಿಸಿದೆ.
ಈ ಮಾರ್ಗದಲ್ಲಿ ಕವಚ್ ವ್ಯವಸ್ಥೆಯನ್ನು ಅಳವಡಿಸುವ ಯೋಜನೆ ಇದೆ ಎಂದು ಸಿನ್ಹಾ ಹೇಳಿದ್ದಾರೆ.
ಇನ್ನು ಸರಕು ಸಾಗಣೆ ರೈಲಿನ ಚಾಲಕ ಸಿಗ್ನಲ್‌ಗಳನ್ನು ಉಪೇಕ್ಷಿಸಿದ ಕಾರಣಕ್ಕೆ ಅಪಘಾತ ಉಂಟಾಗಿರಬಹುದು ಎಂದು ಅವರು ತಿಳಿಸಿದ್ದಾರೆ.
ಗಾರ್ಡ್ ಇರುವ ಬೋಗಿ ಹಾಗೂ ರೈಲಿನ ಪಾರ್ಸೆಲ್ ವ್ಯಾನ್‌ಗಳಿಗೆ ಹಾನಿ ಆಗಿದೆ. ಹೀಗಾಗಿ ಪ್ರಯಾಣಿಕರ ಕೋಚ್‌ಗೆ ಹೆಚ್ಚಿನ ಹಾನಿ ಉಂಟಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
ಕವಚ್ ವ್ಯವಸ್ಥೆಯನ್ನು ಅಳವಡಿಸುವ ಕಾರ್ಯವನ್ನು ತ್ವರಿತವಾಗಿ ಮಾಡಲಾಗುತ್ತಿದೆ. ಈ ವ್ಯವಸ್ಥೆಯು ಒಟ್ಟು 1,500 ಕಿ.ಮೀ. ಉದ್ದದ ರೈಲು ಮಾರ್ಗದಲ್ಲಿ ಅಳವಡಿಕೆ ಆಗಿದೆ. ಈ ವರ್ಷದ ಅಂತ್ಯದ ವೇಳೆಗೆ ಇನ್ನೂ 3,000 ಕಿ.ಮೀ. ಉದ್ದದ ಮಾರ್ಗಕ್ಕೆ ಇದನ್ನು ಅಳವಡಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.