ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಜಿಎಫ್ ಚಾಪ್ಟರ್ 2 ಸಹ-ನಿರ್ದೇಶಕರಾದ ಕೀರ್ತನ್ ನಾಡಗೌಡರ ನಾಲ್ಕು ವರ್ಷದ ಪುತ್ರ ಲಿಫ್ಟ್‌ನಲ್ಲಿ ಸಿಲುಕಿ ಮೃತಪಟ್ಟಿದ್ದಾನೆ.
ಕೀರ್ತನ್ ಮತ್ತು ಸಮೃದ್ಧಿ ಪಟೇಲ್ ಅವರ ಪುತ್ರ ಚಿರಂಜೀವಿ ಸೋನಾರ್ಷ್ ಕೆ. ನಾಡಗೌಡ ಲಿಫ್ಟ್‌ನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಪುತ್ರನನ್ನು ಕಳೆದುಕೊಂಡ ನಿರ್ದೇಶಕರ ಕುಟುಂಬ ಕಣ್ಣೀರಿಟ್ಟಿದ್ದಾರೆ.
ಈ ವಿಷಯ ತಿಳಿದ ನಂತರ, ಚಿತ್ರರಂಗದ ಅನೇಕರು ಕೀರ್ತನ್ ನಾಡಗೌಡ ಕುಟುಂಬಕ್ಕೆ ಸಾಂತ್ವನ ತುಂಬಿದ್ದಾರೆ. ಜೊತೆಗೆ ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಕೂಡ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

