ಏಕಾಏಕಿ ಮೆಟ್ರೋ ಟ್ರ್ಯಾಕ್ ಗೆ ಜಿಗಿದ ಕಂದಮ್ಮ!! ಮುಂದೇನಾಯ್ತು ನೀವೇ ಓದಿ..

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ನಾಲ್ಕು ವರ್ಷದ ಮಗುವೊಂದು ಮೆಟ್ರೋ ಹಳಿ ಮೇಲೆ ಹಾರಿ ಅವಾಂತರ ಸೃಷ್ಟಿಸಿದೆ.

ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ಮೆಜೆಸ್ಟಿಕ್‌ಗೆ ತೆರಳಲು ತಾಯಿ ಹಾಗೂ ನಾಲ್ಕು ವರ್ಷದ ಮಗು ಮೆಟ್ರೋ ನಿಲ್ದಾಣಕ್ಕೆ ಬಂದಿದ್ದರು. ಮೆಟ್ರೋಗಾಗಿ ಕಾಯುತ್ತಿದ್ದಾಗ ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆ ಟ್ರ್ಯಾಕ್ ಮೇಲೆ ಹಾರಿದೆ. ಅಪಘಾತದ ಸ್ಥಳದಲ್ಲಿ ಇಬ್ಬರು ಮೆಟ್ರೋ ಸಿಬ್ಬಂದಿಗಳು ತಕ್ಷಣವೇ ಟ್ರ್ಯಾಕ್ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದರು.

ಮಗುವನ್ನು ರಕ್ಷಿಸಿ ಮೇಲಕೆತ್ತಲಾಗಿದೆ. ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಬೈಯ್ಯಪ್ಪನ ಹಳ್ಳಿ ನಿಲ್ದಾಣದ ನೇರಳೆ ಮಾರ್ಗದಲ್ಲಿ ಸಂಚಾರವನ್ನು ಕೆಲಕಾಲ ಸ್ಥಗಿತಗೊಳಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!