‘ಎಮರ್ಜೆನ್ಸಿ’ ರಿಲೀಸ್ ಡೇಟ್ ಘೋಷಿಸಿದ ಕಂಗನಾ ರಣಾವತ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಾಲಿವುಡ್ ನಟಿ ಕಂಗನಾ ರಣಾವತ್ ಅಭಿನಯದ ಇಂದಿರಾ ಗಾಂಧಿ ಕುರಿತ ಸಿನಿಮಾ ‘ಎಮರ್ಜೆನ್ಸಿ’ ರಿಲೀಸ್ ಗೆ ಡೇಟ್ ಫಿಕ್ಸ್ ಆಗಿದೆ.

ಕಳೆದ ಕೆಲವು ತಿಂಗಳುಗಳಿಂದ ಚುನಾವಣೆ ಕೆಲಸ ಎಂದು ಕಂಗನಾ ಬ್ಯುಸಿಯಾಗಿದ್ದರು. ರಿಲೀಸ್ ಡೇಟ್ ಕೂಡ ಮುಂದಕ್ಕೆ ಹೋಗಿತ್ತು. ಈಗ ಸೆಪ್ಟೆಂಬರ್ 6ರಂದು ‘ಎಮರ್ಜೆನ್ಸಿ’ ಸಿನಿಮಾ ರಿಲೀಸ್ ಮಾಡೋದಾಗಿ ಕಂಗನಾ ಘೋಷಿಸಿದ್ದಾರೆ.

ಭಾರತದ ಪ್ರಜಾಪ್ರಭುತ್ವದ ಕರಾಳ ಅಧ್ಯಾಯಕ್ಕೆ 50 ವರ್ಷವಾದ ಹಿನ್ನೆಲೆಯಲ್ಲಿ ‘ಎಮರ್ಜೆನ್ಸಿ’ ಚಿತ್ರದ ರಿಲೀಸ್ ಡೇಟ್ ಘೋಷಿಸುತ್ತಿದ್ದೇನೆ. ಸ್ವಾತಂತ್ರ್ಯ ಭಾರತದ ಅತ್ಯಂತ ವಿವಾದಾತ್ಮಕ ನಿರ್ಣಯದ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಎಂದು ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅಂದಹಾಗೆ, ಇಂದಿರಾ ಗಾಂಧಿ ಪಾತ್ರಕ್ಕೆ ಕಂಗನಾ ಜೀವ ತುಂಬಿದ್ದು, ಈ ಚಿತ್ರಕ್ಕೆ ನಿರ್ದೇಶನದ ಜೊತೆ ನಿರ್ಮಾಣ ಕೂಡ ಮಾಡ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!