ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ನಟಿ ಕಂಗನಾ ರನೌತ್ ತಮ್ಮ ಗೆಲುವನ್ನು ಪ್ರಧಾನಿ ಮೋದಿಗೆ ಅರ್ಪಿಸಿದ್ದಾರೆ .
ನನ್ನ ಜನ್ಮಭೂಮಿ ಹಿಮಾಚಲ ಪ್ರದೇಶದಲ್ಲಿ ಜನರ ಸೇವೆಯನ್ನು ಮುಂದುವರಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿಯವರ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಗುರಿಯಲ್ಲಿ ನಾನು ಸೈನಿಕನಾಗಿ ಕೆಲಸ ಮಾಡುತ್ತೇನೆ. ಬಹುಶಃ, ಬೇರೊಬ್ಬರು ತಮ್ಮ ಬ್ಯಾಗ್ ಪ್ಯಾಕ್ ಮಾಡಿ ಹೊರಡಬೇಕಾಗುತ್ತದೆ. ಆದರೆ ನಾನು ಇಲ್ಲಿ ಇದ್ದೇ ಇರುತ್ತೇನೆ ಎಂದು ಹೇಳಿದ್ದೆ. ಹಾಗೆಯೇ ಆಗಲಿದೆ, ಪ್ರಧಾನಿ ಮೋದಿಗೆ ನನ್ನ ಸಂಪೂರ್ಣ ಬೆಂಬಲ ಎಂದು ಹೇಳಿದ್ದಾರೆ.