ಕಂಗನಾ ರಣಾವತ್​ಗೆ ಕಪಾಳಮೋಕ್ಷ: CISF ಮಹಿಳಾ ಕಾನ್ ಸ್ಟೆಬಲ್ ಸಸ್ಪೆಂಡ್

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಟಿ, ನೂತನ ಸಂಸದೆ ಕಂಗನಾ ರಣಾವತ್​ಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್ ಮಹಿಳಾ ಕಾನ್‌ಸ್ಟೆಬಲ್ ಕುಲವಿಂದರ್ ಕೌರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಕುಲವಿಂದರ್ ಕೌರ್ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿದೆ.

ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಕುಲ್ವಿಂದರ್ ಕೌರ್ ಅವರು, ಬಾಲಿವುಡ್ ನಟಿ ಕಂಗನಾ ಬಗ್ಗೆ ಮಾತನಾಡುವ ವಿಡಿಯೋ ಕೂಡ ಕಾಣಿಸಿಕೊಂಡಿದೆ.

ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ ಅವರು ಕಂಗನಾ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಲವಿಂದರ್ ಕೌರ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here