ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆ ವಜಾಗೊಳಿಸುವಂತೆ ಕೋರಿ ಅವರು ಪಂಜಾಬ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ಇಂದು ಕೈಗೆತ್ತಿಕೊಂಡಿದ್ದ ಕೋರ್ಟ್, ವಿಚಾರಣೆಯನ್ನು ಜುಲೈ 11 ಮುಂದೂಡಿದೆ.
ರೈತರು ಪ್ರತಿಭಟನೆ ನಡೆಸುವಾಗ ಕಂಗನಾ ರಣಾವತ್ ಮೊಹಿಂದರ್ ಕೌರ್ ಅವರ ಫೋಟೋವನ್ನು ಪೋಸ್ಟ್ ಮಾಡಿ, ಆಕೆಯನ್ನು 100 ರೂಪಾಯಿಗೆ ಪ್ರತಿಭಟನೆಗೆ ಕರೆತರಲಾಗಿದೆ ಎಂದು ಹೇಳಿದ್ದರು.
ಇದನ್ನು ಪೋಸ್ಟ್ ಮಾಡಿದ ನಂತರ ಮೊಹಿಂದರ್ ಕೌರ್ ಬಟಿಂಡಾದಲ್ಲಿ ಕಂಗನಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ದೂರನ್ನು ರದ್ದುಗೊಳಿಸುವಂತೆ ಕೋರಿ ಕಂಗನಾ ಇದೀಗ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ಕುರಿತು ಯಾವುದೇ ಆದೇಶ ನೀಡದೆ ಹೈಕೋರ್ಟ್ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.