spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

‘ತಲೈವಿ’ ಬಳಿಕ ಮತ್ತೊಂದು ಐತಿಹಾಸಿಕ ಸಿನಿಮಾದಲ್ಲಿ ನಟಿಸಲಿದ್ದಾರೆ ಕಂಗನಾ ರಣಾವತ್!

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬಾಲಿವುಡ್ ನಟಿ ಕಂಗನಾ ರಣಾವತ್​​ ‘ತಲೈವಿ’ ಚಿತ್ರದ ಬಳಿಕ ಮತ್ತೊಂದು ಐತಿಹಾಸಿಕ ಸಿನಿಮಾದಲ್ಲಿ ನಟನೆ ಮಾಡಲು ಸನ್ನದ್ಧರಾಗಿದ್ದಾರೆ.
ತಮ್ಮ ಮುಂಬರುವ ಚಿತ್ರದ ಬಗ್ಗೆ ಇನ್​​ಸ್ಟಾಗ್ರಾಂ ಹಾಗೂ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ನಟಿ ಕಂಗನಾ ರಣಾವತ್​, ‘ದಿ ಇನ್​ಕಾರ್ನೇಷನ್​​ ಸೀತಾ’ದಲ್ಲಿ ನಟನೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.
ರಾಮಾಯಣದಲ್ಲಿ ಬರುವ ಶ್ರೀರಾಮನ ಪತ್ನಿ ಸೀತಾ ಪಾತ್ರದಲ್ಲಿ ಕಂಗನಾ ನಟನೆ ಮಾಡಲಿದ್ದಾರೆ.
ಬಿಗ್​ ಬಜೆಟ್​ನ ಸಿನಿಮಾ ಇದಾಗಿದ್ದು, ಬಾಹುಬಲಿ, ಮಗಧೀರ, ಭಜರಂಗಿ ಭಾಯ್​ಜಾನ್​​ ಸೇರಿದಂತೆ ಅನೇಕ ಸೂಪರ್​ ಹಿಟ್​​ ಸಿನಿಮಾಗಳಿಗೆ ಚಿತ್ರಕಥೆ ಬರೆದಿರುವ ಕೆ.ವಿ. ವಿಜಯೇಂದ್ರ ಪ್ರಸಾದ್​​ ಇದಕ್ಕೆ ಚಿತ್ರಕಥೆ ಬರೆದಿದ್ದು, ಅಲೌಕಿಕ್​ ದೇಸಾಯಿ ಆ್ಯಕ್ಷನ್ ಕಟ್​ ಹೇಳಲಿದ್ದಾರೆ.
ಚಿತ್ರಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅಲೌಕಿಕ್​ ದೇಸಾಯಿ, ಚಿತ್ರದಲ್ಲಿ ಸೀತಾ ಪಾತ್ರದಲ್ಲಿ ನಟಿ ಕಂಗನಾ ನಟನೆ ಮಾಡುತ್ತಿರುವುದು ಖುಷಿ ಮೂಡಿಸಿದೆ. ಚಿತ್ರಕ್ಕಾಗಿ ಅವರನ್ನು ಸ್ವಾಗತ ಮಾಡಲು ಸಜ್ಜಾಗಿದ್ದೇವೆ ಎಂದಿದ್ದಾರೆ.
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರ ಜೀವನಾಧಾರಿತ ಚಿತ್ರ ‘ತಲೈವಿ’ ಚಿತ್ರದಲ್ಲಿ ನಟನೆ ಮಾಡಿರುವ ಕಂಗನಾ, ಈಗಾಗಲೇ ಎಲ್ಲರಿಂದಲೂ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss