August 24, 2026
Monday, August 24, 2026
spot_img

ಸೋಶಿಯಲ್ ಮೀಡಿಯಾದಲ್ಲಿ ಕಂಗನಾ Vs ಸೌರವ್ ವಾರ್: ಆರೋಪ-ಪ್ರತ್ಯಾರೋಪದ ಜಟಾಪಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿದ್ಯಾರ್ಥಿಗಳ ಪ್ರತಿಭಟನೆ ಕುರಿತ ಹೇಳಿಕೆ ಒಂದರಿಂದ ಆರಂಭವಾದ ಭಿನ್ನಾಭಿಪ್ರಾಯ ಇದೀಗ ರಾಜಕೀಯ ವಾಗ್ವಾದವಾಗಿ ಮಾರ್ಪಟ್ಟಿದೆ. ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರನೌತ್ ಮತ್ತು ಸಿಜೆಪಿ ಮುಖ್ಯ ವಕ್ತಾರ ಸೌರವ್ ದಾಸ್ ಪರಸ್ಪರ ತೀಕ್ಷ್ಣ ಹೇಳಿಕೆಗಳನ್ನು ನೀಡಿದ್ದು, ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ವಿದ್ಯಾರ್ಥಿ ಪ್ರತಿಭಟನೆ ಕುರಿತು ಕಂಗನಾ ಹೇಳಿಕೆ

ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆ ಕಂಗನಾ ರನೌತ್ ಅಸಮಾಧಾನ ವ್ಯಕ್ತಪಡಿಸಿದ್ದರು. ಪ್ರತಿಭಟನೆಯಲ್ಲಿ ಬಳಸಿದ ಭಾಷೆ ಹಾಗೂ ವೈಯಕ್ತಿಕ ಟೀಕೆಗಳು ಸಮಾಜಕ್ಕೆ ಒಪ್ಪುವಂತಿಲ್ಲ ಎಂದು ಹೇಳಿದ ಅವರು, ಕೆಲವು ವಿಡಿಯೋಗಳನ್ನು ಹಂಚಿಕೊಂಡು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ:

ಸೌರವ್ ದಾಸ್ ಟೀಕೆ

ಕಂಗನಾ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಜೆಪಿ ಮುಖ್ಯ ವಕ್ತಾರ ಸೌರವ್ ದಾಸ್, ಅವರನ್ನು ಅವರದೇ ಪಕ್ಷ ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಟೀಕಿಸಿದರು. ಯುವಜನರೂ ಅವರ ಅಭಿಪ್ರಾಯಕ್ಕೆ ಹೆಚ್ಚಿನ ಮಹತ್ವ ನೀಡುವುದಿಲ್ಲ ಎಂದು ಹೇಳಿ, ಸಂಸದೆಯಾಗಿ ಕೆಲಸದ ಸವಾಲುಗಳ ಬಗ್ಗೆ ಕಂಗನಾ ನೀಡಿದ್ದ ಹಿಂದಿನ ಹೇಳಿಕೆಯನ್ನು ಉಲ್ಲೇಖಿಸಿದರು.

ಕಂಗನಾದ ತೀಕ್ಷ್ಣ ಪ್ರತಿಕ್ರಿಯೆ

ಸೌರವ್ ದಾಸ್ ಟೀಕೆಗೆ ಉತ್ತರಿಸಿದ ಕಂಗನಾ, ಕಳೆದ ಎರಡು ದಶಕಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿದ್ದು, ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದೇನೆ ಎಂದು ಹೇಳಿದರು. ಯಾವುದೇ ಸಾಧನೆ ಇಲ್ಲದವರು ಇತರರ ಪರಿಶ್ರಮವನ್ನು ಅರ್ಥಮಾಡಿಕೊಳ್ಳುವುದಿಲ್ಲ ಎಂದು ಹೇಳಿ, “ಮೊದಲು ಕೌಶಲ್ಯ ಕಲಿಯಿರಿ” ಎಂದು ಸೌರವ್‌ಗೆ ತಿರುಗೇಟು ನೀಡಿದರು. ಈ ವಾಗ್ವಾದ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಎರಡೂ ಕಡೆಯ ಬೆಂಬಲಿಗರ ನಡುವೆ ಭಾರೀ ಚರ್ಚೆಗೆ ಕಾರಣವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !