ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟಿ ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾಗೆ ಕೇಂದ್ರ ಸೆನ್ಸಾರ್ ಮಂಡಳಿಯು ಸರ್ಟಿಫಿಕೇಟ್ ನೀಡದೆ ತಡೆ ನೀಡಿದ್ದನ್ನು ಪ್ರಶ್ನಿಸಿ ಕಂಗನಾ ಬಾಂಬೆ ಹೈಕೋರ್ಟ್ ಮೆಟ್ಟಿಲು ಏರಿದ್ದರು.
ಇದೀಗ ಹೈರ್ಕೋಟ್ ಸೆನ್ಸಾರ್ ಮಂಡಳಿಗೆ ಸೂಚನೆ ನೀಡಿದ್ದು, ಒಂದು ವಾರದ ಒಳಗೆ ಪ್ರಮಾಣ ಪತ್ರದ ತೀರ್ಮಾನ ತಗೆದುಕೊಳ್ಳಬೇಕು ಎಂದಿದೆ.
ಮೊನ್ನೆಯಷ್ಟೇ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಪರಕಾಯ ಪ್ರವೇಶ ಮಾಡಿದ್ದಾರೆ.
1975ರಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರು ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿ ಮಾಡಿದ ಐತಿಹಾಸಿಕ ಸನ್ನಿವೇಶದ ಚಿತ್ರಣ ಹೊಂದಿರುವ ಸಿನಿಮಾ ಇದಾಗಿದೆ. ರಾಜಕೀಯ ಮತ್ತು ಭಾವನಾತ್ಮಕ ಸನ್ನಿವೇಶಗಳನ್ನು ಇಂದಿರಾ ಗಾಂಧಿ ಅವರು ಎದುರಿಸಿದ ರೀತಿಯನ್ನು ಟ್ರೈಲರ್ ಮೂಲಕ ಝಲಕ್ ತೋರಿಸಲಾಗಿದೆ.