ಎನ್‌ಎಸ್‌ಯುಐ ಉಸ್ತುವಾರಿಯಾಗಿ ಕನ್ಹಯ್ಯಾ ಕುಮಾರ್ ನೇಮಕ: ಕಾಂಗ್ರೆಸ್

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ಉಸ್ತುವಾರಿಯಾಗಿ ಕನ್ನಯ್ಯ ಕುಮಾರ್‌ ಅವರನ್ನು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ನೇಮಕ ಮಾಡಿದ್ದಾರೆ.

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್‌ ಈ ಕುರಿತು ಮಾಹಿತಿ ನೀಡಿದರು.

ಕನ್ಹಯ್ಯಾ ಕುಮಾರ್ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾಗಿ, ಅಖಿಲ ಭಾರತ ವಿದ್ಯಾರ್ಥಿ ಫೆಡರೇಶನ್ ನಾಯಕರಾಗಿ ಹಾಗೂ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. 2021ರ ಸೆಪ್ಟೆಂಬರ್ ರಂದು ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸೇರಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!