ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡದ ಖ್ಯಾತ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಇಂದು ಕೊನೆಯುಸಿರೆಳೆದಿದ್ದಾರೆ.
ಪತಿ ವಿಜಯ್ ಜತೆ ಬ್ಯಾಂಕಾಕ್‌ಗೆ ಸ್ಪಂದನಾ ತೆರಳಿದ್ದು, ಅಲ್ಲಿಯೇ ಹೃದಯಾಘಾತವಾಗಿದೆ. ದಂಪತಿ ಇನ್ನೇನು ಕೆಲವೇ ದಿನಗಳಲ್ಲಿ 16ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳಬೇಕಿತ್ತು.
ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿ ಸ್ಪಂದನಾ ಹಾಗೂ ನಟ ವಿಜಯ್ ರಾಘವೇಂದ್ರ ಪ್ರೀತಿಸಿ ಮದುವೆಯಾದವರು. ಇವರಿಗೆ ಶೌರ್ಯ ಎಂಬ ಪುತ್ರನಿದ್ದಾನೆ. ವಿಜಯ್ ಹಾಗೂ ಶೌರ್ಯನಿಗೆ ಈ ದುಃಖವನ್ನು ಸಹಿಸುವ ಶಕ್ತಿ ದೇವರು ನೀಡಲಿ ಎಂದು ಅಭಿಮಾನಿಗಳು ಕಣ್ಣೀರಿಟ್ಟಿದ್ದಾರೆ.