Tuesday, September 2, 2025

ಕನ್ನಡ ಬಿಗ್ ಬಾಸ್ ನ ಪ್ರೋಮೋ ಔಟ್: ಹೊಸ ಗೇಟ್ ಅಪ್ ನಲ್ಲಿ ಕಿಚ್ಚ ಸುದೀಪ್ ಎಂಟ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಗ್ ಬಾಸ್ ಕನ್ನಡ ಹೊಸ ಸೀಸನ್​ ಆರಂಭಕ್ಕೆ ಕ್ಷಣಗಣನೆ ಬಾಕಿ ಉಳಿದಿದ್ದು, ಇಂದು ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಕಾರಣ ಬಿಗ್ ಬಾಸ್ ಕನ್ನಡ ಸೀಸನ್ 12ರ ಮೊದಲ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿದೆ.

ಇತ್ತೀಚೆಗಷ್ಟೆ ಸ್ವಾತಂತ್ರ್ಯ ದಿನದಂದು ಆಗಸ್ಟ್ 15 ರಂದು ಬಿಗ್ ಬಾಸ್ ಕನ್ನಡ ಸೀಸನ್ 12ರ ಹೊಸ ಲೋಗೋ ಬಿಡುಗಡೆ ಮಾಡುವ ಮೂಲಕ ಸದ್ಯದಲ್ಲೇ ಅತಿ ದೊಡ್ಡ ರಿಯಾಲಿಟಿ ಶೋ ಶುರುವಾಗುವ ಸೂಚನೆ ನೀಡಿತ್ತು. ಇದೀಗ ಮೊದಲ ಪ್ರೋಮೋ ಔಟ್ ಆಗಿದೆ.

https://www.facebook.com/colorskannada/videos/759969926854746/

ಈ ಬಾರಿ ಹೊಸ ಪ್ರೋಮೋದಲ್ಲಿ ಕಿಚ್ಚ ಸುದೀಪ್ ಅಂತೂ ಉದ್ದನೆಯ ಹೊಸ ಹೇರ್​ ಸ್ಟೈಲ್​ನಲ್ಲಿ ಸಖತ್ ಆಗಿ ಮಿಂಚಿದ್ದಾರೆ. ಸೆಪ್ಟೆಂಬರ್ 28 ರಿಂದ ಶೋ ಆರಂಭವಾಗಲಿದೆ ಎಂದು ಸುದೀಪ್ ಹೇಳಿದ್ದಾರೆ.

ಬಿಗ್​​ಬಾಸ್ ಸೀಸನ್ 12 ಸೆಪ್ಟೆಂಬರ್ 28ಕ್ಕೆ ಪ್ರಾರಂಭ ಆಗಲಿದೆ ಎಂದು ಈಗಾಗಲೇ ಕಿಚ್ಚ ಸುದೀಪ್ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ