Sunday, October 12, 2025

ಕನ್ನಡ ಬಿಗ್ ಬಾಸ್ ಸೀಸನ್ 12ಕ್ಕೆ ಎದುರಾಯ್ತು ವಿಘ್ನ: ಜನರ ನೆಚ್ಚಿನ ಶೋ ಬಂದ್ ಆಗುತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಗ್ ಬಾಸ್ ಸೀಸನ್ 12ಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಬಿಗ್ ಬಾಸ್ ರಿಯಾಲಿಟಿ ಶೋ ನಡೆಯುತ್ತಿರೋ ಬಿಡದಿ ಸಮೀಪದ ಜಾಲಿವುಡ್ ಸ್ಟುಡಿಯೋಸ್ & ಅಡ್ವೆಂಚರ್ಸ್ ಪಾರ್ಕ್ ಬಂದ್ ಮಾಡಲು ರಾಜ್ಯ ಮಾಲೀನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ.

ಮಾಲೀನ್ಯ ನಿಯಂತ್ರಣ ಮಂಡಳಿ ಅನುಮತಿ ಪಡೆಯದೇ ಮನರಂಜನಾ ಪಾರ್ಕ್ ಓಪನ್ ಮಾಡಿರೋ ಆರೋಪ ಕೇಳಿಬಂದಿದೆ. ಅಲ್ಲದೇ ಅವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಹಾಗೂ ತ್ಯಾಜ್ಯದ ನೀರನ್ನ ಪರಿಸರಕ್ಕೆ ಬಿಡುವ ಮೂಲಕ ಮಾಲಿನ್ಯ ನಿಯಂತ್ರಣ ಕಾಯ್ದೆಗಳನ್ನ ಉಲ್ಲಂಘನೆ ಮಾಡಿರೋ ಆರೋಪ ಕೇಳಿಬಂದಿದೆ.

ಕರ್ನಾಟಕ ಮಾಲಿನ್ಯ ನಿಯಂತ್ರಣ ಕಾಯ್ದೆ 1981ರ ಸೆಕ್ಷನ್ 31, ಕಾಯ್ದೆ 1983 ನಿಯಮ 20(ಎ) ಅನ್ವಯ ತಕ್ಷಣದಿಂದಲೇ ಸ್ಟುಡಿಯೋ ಬಂದ್ ಮಾಡಲು ಆದೇಶ ಹೊರಡಿಸಿದೆ.

error: Content is protected !!