ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಕನ್ನಡ ರಾಜ್ಯೋತ್ಸವಕ್ಕೆ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಮೈದಾನದಲ್ಲಿ ಇಂದು ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ಗಣ್ಯರು, ಶಾಲಾ ಮಕ್ಕಳು, ಮುಖ್ಯ ಅತಿಥಿಗಳು, ಸರ್ಕಾರಿ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಕಾರ್ಯಕ್ರಮ ಹಿನ್ನೆಲೆಯಲ್ಲಿ ಕಸ್ತೂರಬಾ ರಸ್ತೆ, ಲ್ಯಾವೆಲ್ಲೆ ರಸ್ತೆ, ರಾಜಾ ರಾಮ್ ಮೋಹನ್ ರಾಯ್ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆ, ನೃಪತುಂಗ ರಸ್ತೆ ಸೇರಿದಂತೆ ಮೈದಾನದ ಸುತ್ತಮುತ್ತ ವಾಹನ ಸಂಚಾರಕ್ಕೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ. ಶಾಲಾ ಮಕ್ಕಳು ಈ ರಸ್ತೆಗಳ ಮೂಲಕ ಮೆರವಣಿಗೆ ಬರುವುದರಿಂದ ವಾಹನಗಳ ಪಾರ್ಕಿಂಗ್‌ಗೆ ನಿರ್ಬಂಧಿಸಲಾಗಿದೆ. ಬದಲಿಗೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚನೆ ನೀಡಲಾಗಿದೆ.
ಬೆಳಗ್ಗೆ ಆರು ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ಈ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ಅನ್ನು ಕಟ್ಟುನಿಟ್ಟಾಗಿ ನಿರ್ಭಂಧಿಸಿ ಆದೇಶಿಸಿದ್ದಾರೆ. ಇನ್ನೂ ಕ್ರೀಡಾಂಗಣದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.