ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ಯಾಂಕ್‌ಗಳಲ್ಲಿ ಆಡಳಿತಾತ್ಮಕವಾಗಿ ಕೆಲಸ ಮಾಡುವ ಕನ್ನಡಿಗರ ಸಂಖ್ಯೆ ನಿರಂತರವಾಗಿ ಕಡಿಮೆಯಾಗುತ್ತಿದ್ದು, ಇದು ಭವಿಷ್ಯದಲ್ಲಿ ಸಾಮಾಜಿಕ ಸಂಘರ್ಷಗಳಿಗೆ ಕಾರಣವಾಗಬಹುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಎಚ್ಚರಿಸಿದ್ದಾರೆ.
ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಮಿತಿಯ ಅಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಬ್ಯಾಂಕುಗಳು ಸಾರ್ವಜನಿಕ ಸಂಪರ್ಕ ವಿಭಾಗಗಳಲ್ಲಿ ಸ್ಥಳೀಯ ಭಾಷೆ ಬಲ್ಲವರನ್ನು ನೇಮಿಸುವುದು ಬಹಳ ಮುಖ್ಯವಾಗಿದ್ದು, ಇದು ವಿಳಂಬವಾದಲ್ಲಿ ನಾಡಿನೆಲ್ಲೆಡೆ ಸಾಮಾಜಿಕ ಸಂಘರ್ಷ ಆರಂಭವಾಗಲಿದೆ ಎಂದು ಹೇಳಿದರು,
ಆಡಳಿತದಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡುವ ಮೂಲಕ, ಬ್ಯಾಂಕ್‌ಗಳು ಜನಸ್ನೇಹಿಯಾಗಬೇಕು. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲ ಬ್ಯಾಂಕ್‌ಗಳ ಪ್ರತಿನಿಧಿಗಳೊಂದಿಗೆ ಶೀಘ್ರದಲ್ಲೆ ಸಭೆ ನಡೆಸಿ, ಸೂಚನೆಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು.