ಹೊಸದಿಗಂತ ವರದಿ, ಹುಬ್ಬಳ್ಳಿ:
ಕೇಂದ್ರ ಸರ್ಕಾರದಿಂದ ಪ್ರಾದೇಶಿಕ ಭಾಷೆಗಳ ಕಡೆಗಣನೆಯಾಗಿಲ್ಲ. ಐಎಎಸ್ ಪರೀಕ್ಷೆಯನ್ನೂ ಸಹ ಕನ್ನಡದಲ್ಲೇ ಬರೆದು ಬಹುತೇಕರು ಅಧಿಕಾರಿಗಳಾಗಿದ್ದಾರೆ ಎಂದು ಮಾಜಿ ಮುಖ್ಯ ಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ಮಂಗಳವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕನ್ನಡ ಪರಿಗಣಿಸದಿದ್ದರೆ ಕೇಂದ್ರ ಸರ್ಕಾರದ ಗಮನಕ್ಕೆ ತಂದು ಆದ್ಯತೆ ನೀಡಲು ಒತ್ತಾಯಿಸಲಾಗುತ್ತದೆ ಎಂದರು. ಮುಂಬರುವ ಚುನಾವಣೆಯಲ್ಲಿ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಮಾಧ್ಯಮದವರು ಕೇಳಿದ್ದರಿಂದ ಹೇಳಿದೆ ಅಷ್ಟೇ. ಅದು ನನ್ನ ವೈಯಕ್ತಿಕ ಹೇಳಿಕೆಯಲ್ಲ ಎಂದು ತಿಳಿಸಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ