ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಎಲ್ಲಾ ಮಳಿಗೆಗಳಲ್ಲಿ ಅಳವಡಿಸುವ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯವಾಗಿದೆ.
ಹೆಸರು ಬದಲಾಯಿಸಲು ಅಥವಾ ಕನ್ನಡದಲ್ಲಿ ಬರೆಸಲು ಸರ್ಕಾರ ನೀಡಿದ್ದ ಗಡುವು ನಿನ್ನೆಗೆ ಮುಕ್ತಾಯವಾಗಿದೆ.
ಇದೀಗ ಸರ್ಕಾರ ಈ ಗಡುವನ್ನು ಇನ್ನೂ ಎರಡು ವಾರಗಳಿಗೆ ವಿಸ್ತರಣೆ ಮಾಡಿದೆ. ವ್ಯಾಪಾರಸ್ತರು ಹಾಗೂ ಕಂಪನಿಗಳು ಇನ್ನೂ ಕೆಲವು ದಿನ ಸಮಯ ನೀಡಿ ಎಂದು ಕೇಳಿದ್ದು, ಸರ್ಕಾರ ಎರಡು ವಾರಗಳ ಗಡುವು ವಿಸ್ತರಣೆ ಮಾಡಿದೆ.
ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ.
ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿಹಿಡಿಯುವುದು ಅತಿ…
— DK Shivakumar (@DKShivakumar) February 29, 2024