ಕನ್ನಡ ನಾಡು ಸಜ್ಜನಿಕೆಯ ನಿರೂಪಕಿಯನ್ನು ಕಳೆದುಕೊಂಡಿದೆ: ಸಿಎಂ ಸಿದ್ದು ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡದ ಖ್ಯಾತ ಟಿವಿ ನಿರೂಪಕಿ ಅಪರ್ಣಾ ವಸ್ತಾರೆ ವಿಧಿವಶರಾಗಿದ್ದಾರೆ. ಇದೀಗ ಅಪರ್ಣಾ ನಿಧನಕ್ಕೆ ಸಿದ್ದರಾಮಯ್ಯ ಸೇರಿದಂತೆ ಗಣ್ಯಮಾನ್ಯರು ಸಂತಾಪ ಸೂಚಿಸಿದ್ದಾರೆ.

ಚಿತ್ರರಂಗದ ಖ್ಯಾತ ನಟಿ ಹಾಗೂ ನಿರೂಪಕಿ ಅಪರ್ಣಾ ನಿಧನದ ಸುದ್ದಿ ದುಃಖ ತಂದಿದೆ. ಸರ್ಕಾರಿ ಕಾರ್ಯಕ್ರಮಗಳು ಸೇರಿದಂತೆ ಪ್ರಮುಖ ಕನ್ನಡದ ನೆಟ್‌ವರ್ಕ್‌ಗಳಲ್ಲಿನ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಸೊಗಸಾಗಿ ನಿರೂಪಣೆ ಮಾಡುತ್ತಾ ಪ್ರಸಿದ್ದಿ ಪಡೆದ ಬಹುಮುಖ ಪ್ರತಿಭೆಯು ಇಷ್ಟು ಬೇಗ ನಮ್ಮನ್ನು ಅಗಲಿರುವುದು ದುಃಖಕರವಾಗಿದೆ. ದಿವಂಗತ ಅಪರ್ಣಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬವು ಅವರ ದುಃಖವನ್ನು ಭರಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ತಮ್ಮ ಎಕ್ಸ್ ನಲ್ಲಿ ಬರೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!