ಕನ್ನಡ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ ದಿನಾಂಕ ಬದಲಾವಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ’ಯ ದಿನಾಂಕವನ್ನು ಬದಲಾಯಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ತಿಳಿಸಿದ್ದಾರೆ.
ನುಡಿಸಿರಿಗೆ ಈಗಾಗಲೇ ದಿನ ನಿಗದಿಯಾಗಿತ್ತು. ಇದೇ ಸಂದರ್ಭದಲ್ಲಿ ಸ್ಕೌಟ್ಸ್-ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯನ್ನು ಆಯೋಜಿಸುವ ಸುವರ್ಣಾವಕಾಶ ನಮ್ಮ ಪಾಲಿಗೆ ಒದಗಿಬಂದಿದೆ. ಈ ಎರಡೂ ಕಾರ್ಯಕ್ರಮಗಳು ಪರಸ್ಪರ ಪೂರಕವಾಗಿ ಏಕಕಾಲದಲ್ಲಿ ನಡೆದರೆ ಅದರಿಂದ ಹೆಚ್ಚಿನ ಪ್ರಯೋಜನ ದೊರೆಯಲಿದೆ. ಈ ಹಿನ್ನಲೆಯಿಂದ ಕಾರ್ಯಕಾರಿ ಸಮಿತಿಯ ತೀರ್ಮಾನದಂತೆ ಆಳ್ವಾಸ್ ನುಡಿಸಿರಿ ಸಮ್ಮೇಳನವನ್ನು ಡಿಸೆಂಬರ್ 16, 17  ಮತ್ತು 18 ರ ಬದಲು ಡಿಸೆಂಬರ್ 21, 22 ಮತ್ತು 23 ನೇ ದಿನಾಂಕಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಕನ್ನಡ ಬಾಂಧವರು ಬದಲಾದ ದಿನಾಂಕವನ್ನು ಗಮನಿಸಿ ಸಹಕರಿಸುವಂತೆ ಮೋಹನ ಆಳ್ವರು ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!