ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕೈಗಾರಿಕೆಗಳು ತಯಾರಿಸುವ ಉತ್ಪನ್ನಗಳನ್ನೂ ಕನ್ನಡದಲ್ಲಿ ಮುದ್ರಿಸುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಶುಕ್ರವಾರ ವಿಧಾನಸೌಧದ ಮುಖ್ಯ ಮೆಟ್ಟಿಲಲ್ಲಿ ನಡೆದ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸುವರ್ಣ ಮಹೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿನ ಉದ್ಯಮಗಳು ತಯಾರಿಸುವ ಉತ್ಪನ್ನಗಳ ಮೇಲೆ ಮಾತ್ರ ಇಂಗ್ಲಿಷ್‌ನಲ್ಲಿ ಮುದ್ರಿಸಲಾಗುತ್ತದೆ. ಇನ್ನು ಮುಂದೆ ಕನ್ನಡ ಭಾಷೆಯಲ್ಲಿ ಹೆಸರುಗಳನ್ನು ಮುದ್ರಿಸುವುದು ಕಡ್ಡಾಯವಾಗಿದೆ. ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಇರುವ ಕಟ್ಟಡವನ್ನು ಅಠಾರ ಕಚೇರಿ ಎಂದು ಕರೆಯಲಾಗುತ್ತದೆ. ಈ ಕಟ್ಟಡದಲ್ಲಿ ಕನ್ನಡದ ವಸ್ತುಸಂಗ್ರಹಾಲಯವನ್ನು ನಿರ್ಮಿಸಲಾಗುವುದು ಎಂದು ಸಿಎಂ ಹೇಳಿದರು.
ಬೇರೆ ರಾಜ್ಯದವರಿಗೂ ಕನ್ನಡ ಕಲಿಸಬೇಕು. ವ್ಯವಹಾರವನ್ನು ಕನ್ನಡದಲ್ಲೇ ನಡೆಸಬೇಕು. ಇಂತಹ ಕೆಲಸವನ್ನು ಸರ್ಕಾರ ಮಾಡಲಿದ್ದು, ಕನ್ನಡವನ್ನು ಎಲ್ಲರಿಗೂ ಕಲಿಸುತ್ತೇವೆ ಎಂದು ಪ್ರಮಾಣ ಮಾಡಬೇಕೆಂದು ಹೇಳಿದ್ದಾರೆ.