ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ 68 ಸಾಧಕರು, 10 ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಮಂಗಳವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಬಿಡುಗಡೆ ಮಾಡಲಿದ್ದಾರೆ.
ಪ್ರಶಸ್ತಿಗಾಗಿ ಈ ಬಾರಿ 3,523 ಅರ್ಜಿ ಹಾಗೂ ಒಟ್ಟು 26,555 ಶಿಫಾರಸು ಪತ್ರ ಬಂದಿದ್ದು, ಈ ಬಾರಿ 68 ನೇ ಕನ್ನಡ ರಾಜ್ಯೋತ್ಸವವಾಗಿರುವ ಹಿನ್ನೆಲೆಯಲ್ಲಿ68ಮಂದಿಯನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ರಾಜ್ಯ ಕರ್ನಾಟಕ ಎಂದು ನಾಮಕರಣಗೊಂಡು ಐವತ್ತು ವರ್ಷ ಪೂರೈಸಿದ ಸುವರ್ಣ ಸಂಭ್ರಮದ ನೆನಪಿನಲ್ಲಿ 10 ಸಂಘ ಸಂಸ್ಥೆಗಳಿಗೂ ಪ್ರಶಸ್ತಿ ನೀಡಲಾಗುತ್ತಿದೆ. ನ.1ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.