ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ರಾಜ್ಯ ಸರ್ಕಾರ ಇಂದು (ಅಕ್ಟೋಬರ್ 30) ಬಿಡುಗಡೆ ಮಾಡಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ ಘೋಷಣೆ ಮಾಡಿದರು. ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಒಟ್ಟು 68 ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಘೋಷಣೆ ಮಾಡಲಾಗಿದೆ. ಇದರ ಜೊತೆ ವಿವಿಧ ಸಾಧನೆ ಮಾಡಿದ 50 ಪುರಷರ ಹಾಗೂ 59 ಜನ ಮಹಿಳಾ ಸಾಧಕರಿಗೆ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ.
ಈ ವರ್ಷ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ವರ್ಷ ಆಗಿರುವುದರಿಂದ ಇದನ್ನು ವಿಶೇಷ ಸಂದರ್ಭ ಎಂದು ಪರಿಗಣಿಸಿ ಸುವರ್ಣ ಸಂಭ್ರಮ-50ರ ಸುವರ್ಣ ಮಹೋತ್ಸವ ಎಂಬ ವಿಶೇಷ ಪ್ರಶಸ್ತಿಯನ್ನು 50 ಸಾಧಕ ಮಹಿಳೆಯರಿಗೆ ಮತ್ತು 50 ಪುರುಷರಿಗೆ ನೀಡಲಾಗುತ್ತಿದೆ. ಇದರಿಂದ 69 + 100 ಒಟ್ಟು 169 ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.