ನಾಡಿನಾದ್ಯಂದ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ, ಸಿಎಂ ಬೊಮ್ಮಾಯಿ ಶುಭಾಶಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಾದ್ಯಂತ 67 ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಹೆಚ್ಚಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಸ್ತ ಜನತೆಗೆ ಶುಭಾಷಯ ತಿಳಿಸಿದ್ದಾರೆ.

ನಾಡಿನ ಏಕತೆ, ಸಮಾನತೆ, ಸ್ವಾಭಿಮಾನ ಹಾಗೂ ಸಹಬಾಳ್ವೆಯ ಸಂಕೇತವೇ ರಾಜ್ಯೋತ್ಸವ. ಪ್ರತಿಯೊಬ್ಬ ಕನ್ನಡಿಗನಿಗೂ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಕಲ್ಪಿಸುವುದು ನಮ್ಮ ಸಂಕಲ್ಪವಾಗಿದೆ ಎಂದಿದ್ದಾರೆ.

 

ರಾಜ್ಯೋತ್ಸವ ಆಚರಣೆಗೆ ಬೆಳಗ್ಗೆಯಿಂದಲೇ ಆರಂಭವಾಗಿದ್ದು, ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲಿದೆ. ಹೆಚ್ಚು ಜನರು ಸೇರುವ ಹಿನ್ನೆಲೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಸಿಎಂ ಬೊಮ್ಮಾಯಿವರಿಂದ ಧ್ವಜಾರೋಹಣ, ನೃಪತುಂಗ ಕಲ್ಯಾಣ ಮಂಟಪದ ಬಳಿ ತಾಯಿ ಭುವನೇಶ್ವರಿ ಪೂಜೆ ಹಾಗೂ ಉತ್ಸವ, ಸಂಜೆ ರಾಜ್ಯೋತ್ಸವ ಪ್ರಶಸ್ತಿ ಪಡೆದವರ ಜತೆ ಸಂತೋಷ ಕೂಟ ನಡೆಯಲಿದೆ.

ನಾಡಿನ ಪ್ರತಿ ಗ್ರಾಮದಲ್ಲಿಯೂ ಕನ್ನಡದ ಕಂಪು ಮೊಳಗಿದ್ದು, ಸರ್ಕಾರಿ ಶಾಲೆ ಹಾಗೂ ಕಚೇರಿಗಳಲ್ಲಿ ರಾಜ್ಯೋತ್ಸವ ಆಚರಣೆ ನಡೆಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿಯೂ ಕನ್ನಡ ಧ್ವಜ ರಾರಾಜಿಸುತ್ತಿದ್ದು, ರಾಜ್ಯೋತ್ಸವದ ಶುಭಾಷಯ ಕೋರುತ್ತಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!