Saturday, November 1, 2025

ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ, ಎಲ್ಲೆಡೆ ಹರಡಿದೆ ಕನ್ನಡ ಕಂಪು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ರಾಜ್ಯೋತ್ಸವ ಆಚರಣೆಗೆ ನಗರದ ಕಂಠೀರವ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕಾರ್ಯಕ್ರಮಕ್ಕೆ ಹಲವು ಜನರು ಆಗಮಿಸುವ ಹಿನ್ನೆಲೆಯಲ್ಲಿ ಸ್ಟೇಡಿಯಂ ಸುತ್ತಮುತ್ತಲೂ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಧ್ವಜಾರೋಹಣ ಮಾಡಲಿದ್ದು, ನಂತರ ರಾಜ್ಯವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮ ಇರುವ ಹಿನ್ನೆಲೆ ನಗರ ಸಂಚಾರ ಪೊಲೀಸರು ಸುತ್ತಮುತ್ತಲಿನ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡೆಗೆ ನಿರ್ಬಂಧ ಹೇರಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಅತಿಥಿಗಳು, ಶಾಲಾ ಮಕ್ಕಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.

error: Content is protected !!