ಹೊಸದಿಗಂತ ಡಿಜಿಟಲ್ ಡೆಸ್ಕ್:
ನವೆಂಬರ್ 1 ಕನ್ನಡ ರಾಜ್ಯೋತ್ಸವ ನಿಮಿತ್ತ ಅಕ್ಟೋಬರ್ 28 ರಂದು ಕೋಟಿ ಕಂಠ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.
ನನ್ನ ನಾಡು ನನ್ನ ಹಾಡು ಘೋಷಣೆಯೊಂದಿಗೆ ಗಾಯನ ಕಾರ್ಯಕ್ರಮ ನಡೆಯಲಿದ್ದು, ಕನ್ನಡ ಮನಸ್ಸುಗಳನ್ನು ಒಂದುಗೂಡಿಸುವ ಪ್ರಯತ್ನ ಇದು ಎಂದು ಹೇಳಿದ್ದಾರೆ.
ಈಗಾಗಲೇ 1.10 ಕೋಟಿ ಜನ ನೋಂದಣಿ ಮಾಡಿಕೊಂಡಿದ್ದಾರೆ. 10 ಸಾವಿರ ಸ್ಥಳಗಳಲ್ಲಿ 1 ಕೋಟಿ ಮಂದಿ ಏಕಕಾಲಕ್ಕೆ ಹಾಡಲಿದ್ದಾರೆ ಎಂದಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 50 ಸಾವಿರ ಜನ ಒಟ್ಟಿಗೆ ಹಾಡಲಿದ್ದಾರೆ ಎಂದಿದ್ದಾರೆ.