ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಮ್ ಇಂಡಿಯಾದ ಯುವ ಸ್ಟಾರ್ ಆಲ್ರೌಂಡರ್ ಶ್ರೇಯಾಂಕಾ ಪಾಟೀಲ್ ಮಹಿಳಾ ಏಷ್ಯಾಕಪ್ 2024 ಟೂರ್ನಿಯಿಂದ ಹೊರಬಿದ್ದಿದ್ದಾರೆ. ಬೆರಳಿನ ಮೂಳೆ ಮುರಿತದಿಂದಾಗಿ ಅವರು ಭಾರತ ತಂಡದಿಂದ ಹೊರಗುಳಿದಿದ್ದಾರೆ ಎಂದು ಹೇಳಲಾಗಿದೆ.
ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಕನ್ನಡತಿ ಶ್ರೇಯಾಂಕಾ ಪಾಟೀಲ್ 3.4 ಓವರ್ಗಳಲ್ಲಿ 14 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೇ ಪಂದ್ಯದಲ್ಲಿ ಕ್ಯಾಚ್ ಹಿಡಿಯುವ ಯತ್ನದಲ್ಲಿ ಶ್ರೇಯಾಂಕಾ ಗಾಯಗೊಂಡಿದ್ದರು. ಆಕೆಯ ಎಡಗೈಯ ನಾಲ್ಕನೇ ಬೆರಳಿಗೆ ಮುರಿತವಾಗಿದ್ದು, ಹೀಗಾಗಿ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.
ಶ್ರೇಯಾಂಕಾ ಪಾಟೀಲ್ ಏಷ್ಯಾಕಪ್ನಿಂದ ಹೊರಬೀಳುತ್ತಿದ್ದಂತೆ ಬದಲಿ ಆಟಗಾರ್ತಿಯಾಗಿ ಹೊರಗುಳಿಯುತ್ತಿದ್ದಂತೆ ತನುಜಾ ಕನ್ವರ್ ಅವರನ್ನು ಅಯ್ಕೆ ಮಾಡಲಾಗಿದೆ. 26 ವರ್ಷ ವಯಸ್ಸಿನ ಎಡಗೈ ಸ್ಪಿನ್ನರ್ ತುನುಜಾಗೆ ಇದು ಚೊಚ್ಚಲ ಅವಕಾಶ.