ಇಂದಿನಿಂದ ಮೂರು ದಿನ ಕನ್ನಡ ಸಾಹಿತ್ಯ ಸಮ್ಮೇಳನ : ಕನ್ನಡ ಹಬ್ಬಕ್ಕೆ ಸಜ್ಜಾದ ಹಾವೇರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದಿನಿಂದ ಮೂರು ದಿನ ಹಾವೇರಿಯಲ್ಲಿ ಅಖಿಲ ಭಾರತ 86ನೇ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ನಗರ ಕನ್ನಡ ಹಬ್ಬಕ್ಕೆ ಸಜ್ಜಾಗಿದೆ. ಹಾವೇರಿ ನಗರವಿಡೀ ಕನ್ನಡ ಬಾವುಟಗಳಿಂದ ರಾರಾಜಿಸುತ್ತಿದ್ದು, ಅಕ್ಷರ ಜಾತ್ರೆಗೆ ಕ್ಷಣಗಣನೆ ಎಣಿಸಲಾಗುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ತು ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸಿದೆ.

ಸಮ್ಮೇಳನಾಧ್ಯಕ್ಷ ಪದ್ಮಶ್ರೀ ಡಾ. ದೊಡ್ಡರಂಗೇಗೌಡರನ್ನು ಭವ್ಯ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಗುತ್ತದೆ. ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಅಕ್ಷರ ಜಾತ್ರೆಗೆ ಬರುವವರಿಗೆ ಊಟ, ಉಪಹಾರದ ವ್ಯವಸ್ಥೆ ಮಾಡಲಾಗಿದ್ದು, ಮೂರು ದಿನವೂ ವಿಭಿನ್ನ ಭಕ್ಯಷಗಳ ತಯಾರಿ ನಡೆದಿದೆ. ಬೆಳಗಿನ ಉಪಹಾರಕ್ಕೆ ಕೇಸರಿಬಾತ್, ಉಪ್ಪಿಟ್ಟು, ಟೀ ನೀಡಲಾಗುತ್ತಿದ್ದು, ಮಧ್ಯಾಹ್ನ ಶೇಂಗಾ ಹೋಳಿಗೆ ಊಟ ನೀಡಲಾಗುತ್ತದೆ.

ಸಚಿವರಾದ ಸುನೀಲ್ ಕುಮಾರ್, ಬಿ.ಸಿ.ಪಾಟೀಲ್, ಬಿ.ಸಿ. ನಾಗೇಶ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಮಾಜಿ ಸಿಎಂ ಯಡಿಯೂರಪ್ಪ, ಸಂಸದರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!