ಕನ್ನಡ ಸಾಹಿತ್ಯ ಸಮ್ಮೇಳನ: ಜೇವರ್ಗಿಯಲ್ಲಿ ಕನ್ನಡ ರಥಕ್ಕೆ ಭವ್ಯ ಸ್ವಾಗತ

ಹೊಸದಿಗಂತ ವರದಿ,ಕಲಬುರಗಿ:

ಹಾವೇರಿಯಲ್ಲಿ 2023ರ ಜನವರಿ 6, 7 ಹಾಗೂ 8 ರಂದು ನಡೆಯಲಿರುವ 86ನೇ ಅಖಿಲ‌ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ರಾಜ್ಯದ್ಯಾಂತ ಸಂಚರಿಸಿಸುತ್ತಿರುವ ಕನ್ನಡದ ಜ್ಯೋತಿ ಹೊತ್ತ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ಕನ್ನಡದ ರಥ ಮಂಗಳವಾರ ಸಂಜೆ ಜೇವರ್ಗಿಗೆ ಆಗಮಿಸಿದ್ದು, ಜಿಲ್ಲಾಡಳಿತದಿಂದ ಭವ್ಯ ಸ್ವಾಗತ ಕೋರಲಾಯಿತು.

ಜಿಲ್ಲಾಡಳಿತ ಪ್ರತಿನಿಧಿಯಾಗಿ ಕನ್ನಡ‌ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ತಹಶೀಲ್ದಾರ ಪ್ರಸನ್ನ ಅವರು ರಥಕ್ಕೆ ಪೂಜೆ ಸಲ್ಲಿಸಿ ಬರಮಾಡಿಕೊಂಡರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ಶರಣರಾಜ್ ಛಪ್ಪರಬಂದಿ,
ಸಂತೋಷ ಕೂಡಳ್ಳಿ, ಜೇವರ್ಗಿ ಕಸಾಪ ಅಧ್ಯಕ್ಷ ಎಸ್.ಕೆ.ಬಿರಾದಾರ , ಪ್ರಮುಖರಾದ ಚನ್ನಮಲ್ಲಯ್ಯ ಹಿರೇಮಠ, ರಾಜಶೇಖರ ಸಿರಿ, ವಿಜಯಕುಮಾರ ಹಿರೇಮಠ, ಧರ್ಮಣ್ಣ ದೊಡ್ಮನಿ, ಗುರುಬಸಪ್ಪ ಸಜ್ಜನಶೆಟ್ಟಿ, ಶ್ರೀಕಾಂತ ಪಾಟೀಲ ತಿಳಗೂಳ, ಸುರೇಶ ದೇಶಪಾಂಡೆ, ರಾಜೇಂದ್ರ ತೆಗನೂರ ಸೇರಿದಂತೆ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ರಥವನ್ನು ಸಂಭ್ರಮದಿಂದ ಬರಮಾಡಿಕೊಂಡರು.

ಕನ್ನಡದ ಅಸ್ಮಿತೆ ಸಾರುವ ನುಡಿ ಜಾತ್ರೆಯ ರಥಕ್ಕೆ ಕಲಾ ತಂಡಗಳು ಭವ್ಯ ಸ್ವಾಗತ ನೀಡಿದವು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!