Sunday, August 14, 2022

Latest Posts

ಕರ್ನಾಟಕದಲ್ಲಿ ಆಡಳಿತ ಭಾಷೆಯಾಗಿ ಕನ್ನಡವೇ ಜಾರಿಯಾಗಬೇಕು: ಸಿವಿಲ್ ನ್ಯಾಯಾಧೀಶೆ ಪ್ರತಿಭಾ 

ದಿಗಂತ ವರದಿ ಸೋಮವಾರಪೇಟೆ:

ಕರ್ನಾಟಕದ ಮಾತೃಭಾಷೆಯಾದ ಕನ್ನಡ ಆಡಳಿತದಲ್ಲಿ ಜಾರಿಯಾಗಬೇಕು; ಎಲ್ಲರೂ ಬಳಸುವಂತಾಗಬೇಕು ಎಂದು ಇಲ್ಲಿನ ಪ್ರಧಾನ ಸಿವಿಲ್ ನ್ಯಾಯಾಧೀಶೆ ಪ್ರತಿಭಾ ಅವರು ಆಶಯ ವ್ಯಕ್ತಪಡಿಸಿದರು.
ಕೊಡಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ವತಿಯಿಂದ ನ್ಯಾಯಾಲಯಗಳಲ್ಲೂ ಕನ್ನಡ ಜಾರಿಯಾಗಬೇಕು ಎಂದು ನೀಡಿದ ಹಕ್ಕೊತ್ತಾಯ ಪತ್ರ ಸ್ವೀಕರಿಸಿ ಅವರು ಮಾತನಾಡಿದರು.
ಕರ್ನಾಟಕದ ಆಡಳಿತ ವ್ಯವಸ್ಥೆಯಲ್ಲಿ ಕನ್ನಡ ಕಟ್ಟುನಿಟ್ಟಾಗಿ ಜಾರಿಯಾಗಬೇಕು ಎಂಬ ಸದಾಶಯದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಂದೋಲನ ರೂಪಿಸಿರುವುದು ಅಭಿನಂದನಾರ್ಹವೆಂದ ಅವರು, ಪ್ರಸ್ತುತ ವ್ಯವಸ್ಥೆಯಲ್ಲಿ ಹಿರಿಯ ನ್ಯಾಯಾಲಯ ಹಾಗೂ ನ್ಯಾಯಮೂರ್ತಿಗಳ ಆದೇಶ ಪಾಲಿಸುವುದಾಗಿ ತಿಳಿಸಿದರು.
ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಎಸ್.ಮಹೇಶ್ ಮಾತನಾಡಿ, ಕರ್ನಾಟಕದಲ್ಲಿ ಕನ್ನಡವೇ ಪ್ರಾಮುಖ್ಯ ವಾಗಬೇಕು. ಆಡಳಿತದಲ್ಲಿ ಕಟ್ಟುನಿಟ್ಟಾಗಿ ಜಾರಿಯಾಗಬೇಕೆಂದು ರಾಜ್ಯ ಸರ್ಕಾರ ಮುಂದಿನ ಆಕ್ಟೊಬರ್ ವರೆಗಿನ ಒಂದು ವರ್ಷವನ್ನು ಕನ್ನಡ ಕಾಯಕ ವರ್ಷವನ್ನಾಗಿ ಘೋಷಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಜಾರಿಗೆ ತರುತ್ತಿದೆ. ಈ ಅಭಿಯಾನದ 3ನೇ ಕಾರ್ಯಕ್ರಮವಾಗಿದ್ದು, ನ್ಯಾಯಾಲಯಗಳಲ್ಲಿ ಕನ್ನಡ ಬಳಕೆ ಅಭಿಯಾನ ಇದಕ್ಕೆ ನಿಮ್ಮೆಲ್ಲರ ಸಹಕಾರ ಅಗತ್ಯವೆಂದರು.
ಕನ್ನಡದಲ್ಲಿ ವಾದ ಮಾಡುವ,ಕನ್ನಡದಲ್ಲಿಯೇ ತೀರ್ಪನ್ನು ನೀಡುವ ಕಾಯಕವನ್ನು ನಿರಂತರಗೊಳಿಸೋಣ ಎಂದು ಮನವಿ ಮಾಡಿದರು.
ವಕೀಲರ ಸಂಘದ ಅಧ್ಯಕ್ಷ ಡಿ.ಕೆ.ತಿಮ್ಮಯ್ಯ ಮಾತನಾಡಿ, ಸರ್ಕಾರ ಹಾಗೂ ಅಭಿವೃದ್ಧಿ ಪ್ರಾಧಿಕಾರದ ಕಾರ್ಯ ಉತ್ತಮವಾದುದು. ಸಣ್ಣ ಪುಟ್ಟ ನ್ಯಾಯಾಲಯಗಳಲ್ಲಿ ಕನ್ನಡ ಬಳಕೆಯಾಗುತ್ತಿದೆ. ವಾದ-ಪ್ರತಿವಾದಗಳು ನಡೆಯುತ್ತಿವೆ.ಇದು ಪರಿಣಾಮಕಾರಿಯಾಗಬೇಕು ಎಂದು ತಿಳಿಸಿದರು.
ಈ ಸಂದರ್ಭ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಕಾಜೂರು ಸತೀಶ್, ಈ.ರಾಜು,
ವಕೀಲರ ಸಂಘದ ಮಾಜಿ ಅಧ್ಯಕ್ಷ ಎಂ.ಬಿ.ಅಭಿಮನ್ಯುಕುಮಾರ್,ವಕೀಲರಾದ ಪವಿತ್ರ ಧರ್ಮಪ್ಪ,ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪ್ರದೀಪ್, ಪಟ್ಟಣ ಪಂಚಾಯ್ತಿ ಅಧ್ಯಕ್ಷ ನಳಿನಿ ಗಣೇಶ್,ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ದೀಪಕ್,ನಗರ ಘಟಕದ ಅಧ್ಯಕ್ಷ ಮಂಜುನಾಥ್, ಮಹಿಳಾ ಆಯೋಗದ ಜಿಲ್ಲಾ ಪ್ರತಿನಿಧಿ ಅಶ್ವಿನಿ ಕೃಷ್ಣಕಾಂತ್,ತಾಲೂಕು ಜನಪದ ಪರಿಷತ್ತು ಖಜಾಂಚಿ ಶರ್ಮಿಳಾ ರಮೇಶ್, ಸೃಷ್ಟಿ ಚಿಗುರು ಬಳಗದ ಅಧ್ಯಕ್ಷ ಸುದರ್ಶನ್ ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss