ಆಸ್ಟ್ರೇಲಿಯನ್ ಓಪನ್ ಡಬಲ್ಸ್ ನಲ್ಲಿ ಕನ್ನಡಿಗ ‘ರೋಹನ್ ಬೋಪಣ್ಣ’ ಗೆಲುವು: ಸಿಎಂ ಅಭಿನಂದನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಇದೇ ಮೊದಲ ಬಾರಿಗೆ ಐತಿಹಾಸಿಕ ದಾಖಲೆ ಎನ್ನುವಂತೆ ಭಾರತದ ರೋಹನ್ ಬೋಪಣ್ಣ ಅವರು ಆಸ್ಟ್ರೇಲಿಯನ್ ಓಪನ್-2024ರ ಪುರುಷರ ಡಬಲ್ಸ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ಹೊಸ ದಾಖಲೆಯನ್ನು ಬರೆದಿದ್ದರು. ಇಂತಹ ಅವರು ಕನ್ನಡಿಗರಾಗಿದ್ದು, ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿನಂದನೆ ತಿಳಿಸಿದ್ದಾರೆ.

ಈ ಕುರಿತಂತೆ ಎಕ್ಸ್ ಮಾಡಿರುವಂತ ಸಿಎಂ ಸಿದ್ಧರಾಮಯ್ಯ, ವಿಶ್ವ ಟೆನ್ನಿಸ್‌ನ ನಂ.1 ಡಬಲ್ಸ್‌ ಆಟಗಾರ, ಕನ್ನಡಿಗ ರೋಹನ್‌ ಬೋಪಣ್ಣ ಅವರು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್‌ ಜೊತೆಗೂಡಿ ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಮೂಲಕ ನಾಡಿಗೆ ಹೆಮ್ಮೆ ಮೂಡಿಸಿದ್ದಾರೆ. ಈ ಪ್ರಶಸ್ತಿ ಗೆಲುವಿನೊಂದಿಗೆ ಅವರು ಗ್ರ್ಯಾಂಡ್‌ ಸ್ಲಾಂ ಪ್ರಶಸ್ತಿ ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ ಹೊಸ ದಾಖಲೆ ಬರೆದಿರುವುದು ವಿಶೇಷ ಎಂದಿದ್ದಾರೆ.

ವಯಸ್ಸು ಬರೀ ಅಂಕಿಗಳಿಗಷ್ಟೇ ಸೀಮಿತ, ಸಾಧನೆಯ ಹಂಬಲ ದೊಡ್ಡದೆಂಬ ಮಾತು ಇವರ ಆಟ ನೋಡಿದವರಿಗೆ ಅನ್ನಿಸದೆ ಇರಲಾರದು. ಇಂತಹ ಇನ್ನಷ್ಟು ದಾಖಲೆಗಳು ರೋಹನ್ ಬೋಪಣ್ಣನವರಿಂದ ಮೂಡಿಬರಲೆಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!