Monday, July 4, 2022

Latest Posts

ಬೆಳಗಾವಿಯಲ್ಲಿ ಎಂಇಎಸ್ ವಿರುದ್ಧ ಕನ್ನಡಿಗರ ಆಕ್ರೋಶ: ಇಂದು ಸುವರ್ಣಸೌಧಕ್ಕೆ ಮುತ್ತಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಡಿನಾಡು ಬೆಳಗಾವಿಯಲ್ಲಿ ಕನ್ನಡಿಗರ ಕಿಚ್ಚು ಹೆಚ್ಚಾಗಿದ್ದು, ಮಹಾರಾಷ್ಟ್ರ ಏಕೀಕರಣ ಸಮಿತಿ ಸೇರಿದಂತೆ ದುಷ್ಕೃತ್ಯ ನಡೆಸಿದ ಹಲವರ ವಿರುದ್ಧ ಇಂದು ಕನ್ನಡಿಗರು ಪ್ರತಿಭಟಿಸಲಿದ್ದಾರೆ.
ಎಂಇಎಸ್ ಪುಂಡರಿಂದ ಕನ್ನಡ ಬಾವುಟಕ್ಕೆ ಅವಮಾನವಾಗಿದ್ದು, ಈ ಬಗ್ಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು, ಖಡಕ್ ಎಚ್ಚರಿಕೆ ನೀಡಬೇಕು ಎಂದು ಹೋರಾಟಗಾರರು ಪ್ರತಿಭಟಿಸಲು ಸಿದ್ಧರಾಗಿದ್ದಾರೆ.
ಕನ್ನಡ ಭಾಷೆಯನ್ನು ಕೆಣಕುವವರ ವಿರುದ್ಧ ಕನ್ನಡಪರ ಸಂಘಟನೆಗಳು ಹೋರಾಡಲು ಸಿದ್ಧವಾಗಿದ್ದು, ಇಂದು ಬೆಳಗಾವಿ ಚಲೋ ನಡೆಸಲು ಮುಂದಾಗಿವೆ.

ಇಂದು ಬೆಳಗಾವಿಯಲ್ಲಿ ರಾಣಿ ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಕನ್ನಡ ಸಂಘಟನೆಗಳು ನಿರ್ಣಯಿಸಿವೆ. ಇದಕ್ಕೆ ಮಹಿಳಾ ಸಂಘಟನೆಗಳು, ರೈತ ಸಂಘಟನೆಗಳು ಬೆಂಬಲ ಸೂಚಿಸಿವೆ. ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿದ್ದು, ಸರ್ಕಾರದ ನಾಯಕರು ಅಲ್ಲೇ ಇದ್ದಾರೆ. ಆದರೂ ಎಂಇಎಸ್ ದುಷ್ಕೃತ್ಯಗಳನ್ನು ಎಸಗುತ್ತಿದ್ದು, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕನ್ನಡಿಗರು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಂಘಟನೆಯನ್ನು ನಿಷೇಧಿಸಬೇಕು ಎನ್ನುವುದು ಇವರ ಒತ್ತಾಯವಾಗಿದೆ.
ಬೆಳಗಾವಿಯಲ್ಲಿ ಪರಿಸ್ಥಿತಿ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದ್ದು, ನಗರದಾದ್ಯಂತ ಬಿಗಿ ಕಟ್ಟೆಚ್ಚರ ವಹಿಸುವಂತೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss