ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರ ಫೆಬ್ರವರಿ 1 ರ ಭಾನುವಾರ ಬಜೆಟ್ ಮಂಡಿಸಲಿದೆ. ಈ ಹೊತ್ತಲ್ಲೇ ಸಿಎಂ ಸಿದ್ದರಾಮಯ್ಯ `ಜಸ್ಟೀಸ್ ಫಾರ್ ಕರ್ನಾಟಕ’ ಅಂತ ಅಭಿಯಾನ ಶುರು ಮಾಡಿದ್ದಾರೆ.
ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಹಿರಂಗ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಕೆಲ ಒತ್ತಾಯಗಳನ್ನು ಸಿಎಂ ಸಿದ್ಧರಾಮಯ್ಯ ಮಾಡಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಕರ್ನಾಟಕದ ಪ್ರಮುಖ ಬೇಡಿಕೆಗಳಿಗೆ ಸಂಬಂಧಿಸಿದಂತೆ ನನ್ನ ಸಾಮಾಜಿಕ ಜಾಲತಾಣದಲ್ಲಿ “ನ್ಯಾಯಕ್ಕಾಗಿ ಕನ್ನಡಿಗರ ಹೋರಾಟ” ಎಂಬ ಅಭಿಯಾನ ಕೈಗೊಂಡಿದ್ದು, ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ತಮ್ಮ ಪತ್ರಿಕೆ, ಯೂಟ್ಯೂಬ್ ಹಾಗೂ ಟಿವಿ ಸುದ್ದಿ ಮಾಧ್ಯಮದಲ್ಲಿ ಹಂಚಿಕೊಂಡು, ಕರ್ನಾಟಕ ಹಾಗೂ ಕನ್ನಡಿಗರ ಹಿತದೃಷ್ಟಿಯಿಂದ ಕೈಗೊಳ್ಳಲಾದ ಈ ಅಭಿಯಾನ ಯಶಸ್ವಿಯಾಗಲು ಬೆಂಬಲಿಸಬೇಕೆಂದು ಕೋರುತ್ತೇನೆ.
- ಕರ್ನಾಟಕದ ಆರ್ಥಿಕ ಸ್ಥಿತಿಯನ್ನು ನೋಡಿದರೆ, 14ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದ ವರದಿಯಿಂದಾಗಿ ಶೇ 23ರಷ್ಟು ತೆರಿಗೆ ಪಾಲು ನೇರವಾಗಿ ಕಡಿಮೆಯಾಯಿತು. ಕೆಲವು ಆರ್ಥಿಕ ಅಜ್ಞಾನಿಗಳು ಈ ಸಂಗತಿಯನ್ನು ಅರ್ಥ ಮಾಡಿಕೊಳ್ಳದೆ ವಿತಂಡವಾದ ಮಾಡುತ್ತಾರೆ. 14ನೇ ಹಣಕಾಸು ಆಯೋಗವು ಶೇ 4.71ರಷ್ಟು ಪಾಲನ್ನು ನಮಗೆ ಒದಗಿಸಿತ್ತು. 15ನೇ ಹಣಕಾಸು ಆಯೋಗವು ಇದನ್ನು ಶೇ 3.64ಕ್ಕೆ ಇಳಿಸುವ ಮೂಲಕ ಘೋರ ಅನ್ಯಾಯ ಮಾಡಿತು. ಉದಾಹರಣೆಗೆ, ರಾಜ್ಯಗಳಿಗೆ ಹಂಚಿಕೆ ಮಾಡುವ ₹100ರಲ್ಲಿ ಮೊದಲು ಕರ್ನಾಟಕಕ್ಕೆ ₹4.71 ಸಿಗುತ್ತಿದ್ದರೆ 15ನೇ ಆಯೋಗವು ಅದನ್ನು ₹3.64 ಇಳಿಸಿತು. ಇದರಿಂದ ರಾಜ್ಯಕ್ಕೆ ನೇರವಾಗಿ ಸುಮಾರು ₹80 ಸಾವಿರ ಕೋಟಿಯಷ್ಟು ಬೃಹತ್ ಪ್ರಮಾಣದ ತೆರಿಗೆ ಪಾಲು ಸಿಗದೆ ಅನ್ಯಾಯವಾಯಿತು.
ದೇಶದ ಆರ್ಥಿಕ ಶಕ್ತಿಯಲ್ಲಿ ಚಾಲಕ ಸ್ಥಾನದಲ್ಲಿರುವ ಕರ್ನಾಟಕ ತಲಾವಾರು ಆರ್ಥಿಕ ಉತ್ಪಾದಕತೆಯಲ್ಲಿ ಮೊದಲ ಸ್ಥಾನದಲ್ಲಿದೆ. ತೆರಿಗೆ, ಸೆಸ್ ಮುಂತಾದ ರೂಪದಲ್ಲಿ ಕೇಂದ್ರ ಸರ್ಕಾರವು ಕರ್ನಾಟಕದಿಂದ ₹4.5 ಲಕ್ಷ ಕೋಟಿಯಿಂದ ₹5 ಲಕ್ಷ ಕೋಟಿಗಳಷ್ಟು ಸಂಗ್ರಹಿಸುತ್ತದೆ. ರಾಜ್ಯದ ಒಟ್ಟಾರೆ ಆಯವ್ಯಯದಲ್ಲಿ ಇಡೀ ದೇಶದಲ್ಲಿಯೇ ಕೇಂದ್ರದಿಂದ ಅತ್ಯಂತ ಕಡಿಮೆ ತೆರಿಗೆ ಪಾಲು ಮತ್ತು ಅನುದಾನ ಪಡೆಯುವ ರಾಜ್ಯವೂ ಕರ್ನಾಟಕವೇ ಆಗಿರುವುದು ದುರದೃಷ್ಟಕರ. ಈ ಹಿನ್ನೆಲೆಯಲ್ಲಿ ನಮಗೆ 14ನೇ ಹಣಕಾಸು ಆಯೋಗವು ನೀಡಿದ್ದ ಶೇ 4.71ರಷ್ಟು ಪಾಲನ್ನು ಕೊಟ್ಟರೆ ಮಾತ್ರ ನಾವು ನಿಟ್ಟುಸಿರು ಬಿಡುವಂತಾಗುತ್ತದೆ. ಅದಕ್ಕಿಂತ ಹೆಚ್ಚು ಕೊಟ್ಟರೆ ಮಾತ್ರ ನೈಜವಾಗಿ ನ್ಯಾಯ ಸಿಕ್ಕಂತಾಗುತ್ತದೆ ಎನ್ನುವುದು ಕರ್ನಾಟಕದ ಒತ್ತಾಯ.
- ಪ್ರಕೃತಿ ವಿಕೋಪಗಳನ್ನು ನಿಭಾಯಿಸಲು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಅನುದಾನಗಳನ್ನು ವೈಜ್ಞಾನಿಕ ವಿಧಾನಗಳ ಮೂಲಕ ಲೆಕ್ಕ ಹಾಕಿ ಹಂಚಿಕೆ ಮಾಡಬೇಕು. 2018-24ರ ಅವಧಿಯಲ್ಲಿ ರಾಜ್ಯವು ಪ್ರಕೃತಿ ವಿಕೋಪಗಳಿಂದಾಗಿ ₹1.56 ಲಕ್ಷ ಕೋಟಿಗಳಷ್ಟು ನಷ್ಟವನ್ನು ಅನುಭವಿಸಿದೆ. 2002ರಿಂದಲೂ ಅತಿವೃಷ್ಟಿ, ಬರ, ಪ್ರವಾಹಗಳಿಗೆ ರಾಜ್ಯವು ನಿರಂತರವಾಗಿ ಒಳಗಾಗುತ್ತಲೇ ಇದೆ. ಇಷ್ಟಿದ್ದರೂ ನಮಗೆ ಕೇವಲ 5 ರಿಸ್ಕ್ ಫ್ಯಾಕ್ಟರ್ ಅಂಕ ನೀಡುವ ಮೂಲಕ ವಂಚಿಸಲಾಗಿದೆ. ಇದನ್ನು 15ಕ್ಕೆ ಏರಿಸಬೇಕು.
- ವಿಕೇಂದ್ರೀಕರಣದಲ್ಲಿ ಉತ್ತಮ ಸಾಧನೆ ಮಾಡಿದ ರಾಜ್ಯಗಳನ್ನು ಪ್ರೋತ್ಸಾಹಿಸಲು ಪಂಚಾಯತ್ ಅಧಿಕಾರ ಹಂಚಿಕೆ ಸೂಚ್ಯಂಕವನ್ನು ಅಳವಡಿಸಿಕೊಳ್ಳಬೇಕು. ಹಿಂದಿನ ಹಣಕಾಸು ಆಯೋಗಗಳು ಜನಸಂಖ್ಯೆಗೆ ಶೇ 90 ಹಾಗೂ ವಿಸ್ತೀರ್ಣಕ್ಕೆ ಶೇ 10ರಷ್ಟು ಮಾನದಂಡಗಳನ್ನು ಅಳವಡಿಸಿಕೊಂಡ ಕಾರಣ, ವಿಕೇಂದ್ರೀಕರಣ ಸಾಧಿಸಿದ ರಾಜ್ಯಗಳಿಗೆ ಅನ್ಯಾಯವಾಯಿತು. ಆದ್ದರಿಂದ ಜನಸಂಖ್ಯೆಗೆ ಶೇ 60, ಭೌಗೋಳಿಕ ವಿಸ್ತೀರ್ಣಕ್ಕೆ ಶೇ 20 ಮತ್ತು ಅಧಿಕಾರ ಹಂಚಿಕೆ ಸೂಚ್ಯಂಕಕ್ಕೆ ಶೇ 20ರಷ್ಟು ಮಾನದಂಡಗಳನ್ನು ನಿಗದಿಪಡಿಸಬೇಕು.
- ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕಕ್ಕೆ 5 ವರ್ಷಗಳಲ್ಲಿ ₹25 ಸಾವಿರ ಕೋಟಿಗಳನ್ನು ಮೀಸಲಿರಿಸಿದೆ. ಇದರ ಜೊತೆಗೆ ಕೇಂದ್ರ ಸರ್ಕಾರವೂ ಅಷ್ಟೇ ಮೊತ್ತವನ್ನು ಮ್ಯಾಚಿಂಗ್ ಗ್ರ್ಯಾಂಟ್ ನೀಡಬೇಕು ಹಾಗೂ ಆ ಭಾಗದ ಪರಿಸರ ಸಂರಕ್ಷಣೆ ಮತ್ತು ವಿಪತ್ತು ನಿರ್ವಹಣೆಗಾಗಿ ₹10 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ನೀಡಬೇಕು.
- ಮಲೆನಾಡು, ಕರಾವಳಿ ಹಾಗೂ ಪಶ್ಚಿಮ ಘಟ್ಟಗಳು ಪರಿಸರ ಸೂಕ್ಷ್ಮ ವಲಯಗಳಾಗಿವೆ. ಅವು ಇಡೀ ಭಾರತದ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಬಹುದೊಡ್ಡ ಪಾತ್ರ ವಹಿಸುತ್ತಿವೆ. ಅಲ್ಲಿನ ಕೃಷಿಕರ ಬದುಕು ಸಂಕಷ್ಟದಲ್ಲಿದೆ. ಅದಕ್ಕಾಗಿ ವಿಶೇಷ ಅನುದಾನಗಳನ್ನು ಒದಗಿಸಬೇಕು. ಅಲ್ಲದೆ, ರಾಜಸ್ಥಾನದ ನಂತರ ಅತಿ ಹೆಚ್ಚು ಒಣ ಭೂಮಿ ಹೊಂದಿರುವ ರಾಜ್ಯ ಕರ್ನಾಟಕವಾಗಿದೆ. ಒಣ ಭೂಮಿಗಳಿಗೆ ನೀರಾವರಿ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ. ಅದಕ್ಕೆ ಅನುದಾನಗಳನ್ನು ಕೊಡಬೇಕು.
- ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿಗೆ ಮುಂದಿನ 5 ವರ್ಷಗಳಲ್ಲಿ ₹1.15 ಲಕ್ಷ ಕೋಟಿಗಳಷ್ಟು ಹೂಡಿಕೆ ಅಗತ್ಯವಿದೆ. ಇದಕ್ಕಾಗಿ 16ನೇ ಹಣಕಾಸು ಆಯೋಗವು ಕನಿಷ್ಠ ₹27,793 ಕೋಟಿಗಳನ್ನಾದರೂ ನೀಡುವಂತೆ ಶಿಫಾರಸು ಮಾಡಬೇಕು.
- ಪ್ರಧಾನಿ ನರೇಂದ್ರ ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ಒತ್ತಾಯ ಮಾಡುತ್ತಿದ್ದಂತೆಯೇ ರಾಜ್ಯಗಳಿಗೆ ಹಂಚಿಕೆ ಮಾಡುತ್ತಿರುವ ಶೇ 41ರಷ್ಟು ಹಂಚಿಕೆಯನ್ನು ಶೇ 50ಕ್ಕೆ ಏರಿಕೆ ಮಾಡಬೇಕು; ಸೆಸ್ ಮತ್ತು ಸರ್‌ಚಾರ್ಜ್‌ಗಳನ್ನು ಕೇಂದ್ರದ ಆದಾಯದ ಶೇ 5ಕ್ಕೆ ಮಾತ್ರ ಸೀಮಿತಗೊಳಿಸಿ, ಉಳಿಕೆ ಮೊತ್ತವನ್ನು ರಾಜ್ಯಗಳಿಗೆ ಹಂಚಬೇಕು ಎಂಬುದು ಕರ್ನಾಟಕದ ಸಮಸ್ತ ನಾಗರಿಕರ ಪರವಾಗಿ ನನ್ನ ಒತ್ತಾಯವಾಗಿದೆ.
- ಮಲೆನಾಡು, ಕರಾವಳಿ ಹಾಗೂ ಪಶ್ಚಿಮ ಘಟ್ಟಗಳು ಪರಿಸರ ಸೂಕ್ಷ್ಮ ವಲಯಗಳಾಗಿವೆ. ಅವು ಇಡೀ ಭಾರತದ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಬಹುದೊಡ್ಡ ಪಾತ್ರ ವಹಿಸುತ್ತಿವೆ. ಅಲ್ಲಿನ ಕೃಷಿಕರ ಬದುಕು ಸಂಕಷ್ಟದಲ್ಲಿದೆ. ಅದಕ್ಕಾಗಿ ವಿಶೇಷ ಅನುದಾನಗಳನ್ನು ಒದಗಿಸಬೇಕು. ಅಲ್ಲದೆ, ರಾಜಸ್ಥಾನದ ನಂತರ ಅತಿ ಹೆಚ್ಚು ಒಣ ಭೂಮಿ ಹೊಂದಿರುವ ರಾಜ್ಯ ಕರ್ನಾಟಕವಾಗಿದೆ. ಒಣ ಭೂಮಿಗಳಿಗೆ ನೀರಾವರಿ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ. ಅದಕ್ಕೆ ಅನುದಾನಗಳನ್ನು ಕೊಡಬೇಕು.
- ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕಕ್ಕೆ 5 ವರ್ಷಗಳಲ್ಲಿ 25 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಿದೆ. ಇದರ ಜೊತೆಗೆ ಕೇಂದ್ರ ಸರ್ಕಾರವೂ ಅಷ್ಟೇ ಮೊತ್ತವನ್ನು ಮ್ಯಾಚಿಂಗ್ ಗ್ರ್ಯಾಂಟ್ ನೀಡಬೇಕು ಹಾಗೂ ಆ ಭಾಗದ ಪರಿಸರ ಸಂರಕ್ಷಣೆ ಮತ್ತು ವಿಪತ್ತು ನಿರ್ವಹಣೆಗಾಗಿ 10 ಸಾವಿರ ಕೋಟಿ ರೂ. ವಿಶೇಷ ಪ್ಯಾಕೇಜ್ ನೀಡಬೇಕು.
- ವಿಕೇಂದ್ರೀಕರಣದಲ್ಲಿ ಉತ್ತಮ ಸಾಧನೆ ಮಾಡಿದ ರಾಜ್ಯಗಳನ್ನ ಪ್ರೋತ್ಸಾಹಿಸಲು ಪಂಚಾಯತ್ ಅಧಿಕಾರ ಹಂಚಿಕೆ ಸೂಚ್ಯಂಕವನ್ನ ಅಳವಡಿಸಿಕೊಳ್ಳಬೇಕು. ಹಿಂದಿನ ಹಣಕಾಸು ಆಯೋಗಗಳು ಜನಸಂಖ್ಯೆಗೆ ಶೇ.90 ಹಾಗೂ ವಿಸ್ತೀರ್ಣಕ್ಕೆ ಶೇ 10 ರಷ್ಟು ಮಾನದಂಡಗಳನ್ನು ಅಳವಡಿಸಿಕೊಂಡ ಕಾರಣ, ವಿಕೇಂದ್ರೀಕರಣ ಸಾಧಿಸಿದ ರಾಜ್ಯಗಳಿಗೆ ಅನ್ಯಾಯವಾಯಿತು. ಆದ್ದರಿಂದ ಜನಸಂಖ್ಯೆಗೆ ಶೇ 60, ಭೌಗೋಳಿಕ ವಿಸ್ತೀರ್ಣಕ್ಕೆ ಶೇ 20 ಮತ್ತು ಅಧಿಕಾರ ಹಂಚಿಕೆ ಸೂಚ್ಯಂಕಕ್ಕೆ ಶೇ 20ರಷ್ಟು ಮಾನದಂಡಗಳನ್ನ ನಿಗದಿಪಡಿಸಬೇಕು.
- ಪ್ರಕೃತಿ ವಿಕೋಪಗಳನ್ನು ನಿಭಾಯಿಸಲು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಅನುದಾನಗಳನ್ನು ವೈಜ್ಞಾನಿಕ ವಿಧಾನಗಳ ಮೂಲಕ ಲೆಕ್ಕ ಹಾಕಿ ಹಂಚಿಕೆ ಮಾಡಬೇಕು. 2018-24ರ ಅವಧಿಯಲ್ಲಿ ರಾಜ್ಯವು ಪ್ರಕೃತಿ ವಿಕೋಪಗಳಿಂದಾಗಿ 1.56 ಲಕ್ಷ ಕೋಟಿ ರೂ.ಗಳಷ್ಟು ನಷ್ಟವನ್ನು ಅನುಭವಿಸಿದೆ. 2002 ರಿಂದಲೂ ಅತಿವೃಷ್ಟಿ, ಬರ, ಪ್ರವಾಹಗಳಿಗೆ ರಾಜ್ಯವು ನಿರಂತರವಾಗಿ ಒಳಗಾಗುತ್ತಲೇ ಇದೆ. ಇಷ್ಟಿದ್ದರೂ ನಮಗೆ ಕೇವಲ 5 ರಿಸ್ಕ್ ಫ್ಯಾಕ್ಟರ್ ಅಂಕ ನೀಡುವ ಮೂಲಕ ವಂಚಿಸಲಾಗಿದೆ. ಇದನ್ನು 15ಕ್ಕೆ ಏರಿಸಬೇಕು.
- 15ನೇ ಹಣಕಾಸು ಆಯೋಗವು ಜನಸಂಖ್ಯೆಯನ್ನು 1971ರ ಬದಲಾಗಿ 2011 ಅನ್ನು ಆಧಾರವಾಗಿರಿಸಿಕೊಂಡ ಕಾರಣದಿಂದಲೂ ನಮಗೆ ತೀವ್ರ ರೂಪದ ಅನ್ಯಾಯವಾಗಿದೆ. ಜನಸಂಖ್ಯಾ ನಿಯಂತ್ರಣದ ಮೂಲಕ ಅಭಿವೃದ್ಧಿ ಸಾಧಿಸುತ್ತಿರುವ ರಾಜ್ಯಗಳಿಗೆ ಇದರಿಂದ ದೊಡ್ಡ ಹೊಡೆತ ಬಿದ್ದಿತು. ಜನಸಂಖ್ಯಾ ನಿಯಂತ್ರಣ ಸಾಧಿಸಿದ ರಾಜ್ಯಗಳಿಗೆ ಉತ್ತೇಜನ ನೀಡುವ ಬದಲು ಘೋರ ಶಿಕ್ಷೆ ನೀಡಲಾಯಿತು. ಇದನ್ನು ಸರಿಪಡಿಸಬೇಕಾದರೆ 1971ರ ಜನಸಂಖ್ಯೆಯನ್ನೇ ಮಾನದಂಡವನ್ನಾಗಿ ಇಟ್ಟುಕೊಳ್ಳಬೇಕು ಹಾಗೂ ಜನಸಂಖ್ಯೆಗೆ ನಿಗದಿಪಡಿಸಿರುವ ಪ್ರಾಮುಖ್ಯವನ್ನು ವೈಜ್ಞಾನಿಕವಾಗಿ ಪರಿಗಣಿಸಬೇಕು.
ಎಕ್ಸ್ ಖಾತೆಯಲ್ಲಿ ಸಿಎಂ ಪೋಸ್ಟ್ ಹಂಚಿಕೊಂಡು ಒತ್ತಾಯಿಸಿದ್ದಾರೆ.



